ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ರೈತ ಸೇರಿ ಎರಡು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ಮೊತ್ತ ಗ್ರಾಮದ 45 ವರ್ಷದ ಶೇಖರ್ ಎಂದು ಗುರುತಿಸಲಾಗಿದ್ದು, ಎಂದಿನಂತೆ ತಮ್ಮ ಜಮೀನಿನಿಂದ ಎತ್ತುಗಳನ್ನು ಹೊಡೆದುಕೊಂಡು ಮನೆಗೆ ವಾಪಸ್ ಆಗುವ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ನಾಲ್ಕು ಜಾನುವಾರು ಪೈಕಿ ಎರಡು ಹಸುಗಳು ತಂತಿಯನ್ನು ದಾಟಿದೆ. ಇನ್ನೆರಡು ಹಸುಗಳು ದಾಟುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಈ ವೇಳೆ ಹಸುಗಳ ಹಿಂದೆಯೇ ಇದ್ದ ರೈತ ಶೇಖರ್ ಗೂ ಕೂಡ ತಲುಗಿದೆ. ಪರಿಣಾಮ 2 ಹಸು ಹಾಗೂ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಘಟನೆಗೆ ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಘಟನೆಯ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.