ಗುಡ್ ನ್ಯೂಸ್ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ: KSRTC ಗೆ 9 ಸಾವಿರ ಸಿಬ್ಬಂದಿ ನೇಮಕಾತಿ..!

ಹುಬ್ಬಳ್ಳಿ: ರಾಜ್ಯ ಸಾರಿಗೆ (KSRTC) ಸಂಸ್ಥೆಗಳಲ್ಲಿ ಕಳೆದ ಏಕಕಾಲಕ್ಕೆ 9 ಸಾವಿರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಮುಂದಾಗಿದ್ದು, ಈ ಪೈಕಿ 1 ಸಾವಿರ ಜನರನ್ನ ಅನುಕಂಪದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಹುಬ್ಬಳ್ಳಿಯ ಗೋಕುಲ ರಸ್ತೆಯ ಎಚ್‌ಡಿಬಿಆರ್‌ಟಿಎಸ್‌ ಘಟಕದಲ್ಲಿ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯ ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7 – 8 ವರ್ಷಗಳಿಂದ ಯಾವುದೇ ನೇಮಕಾತಿ ಪ್ರಕ್ರಿಯೆಗಳು ನಡೆದಲ್ಲ. ಹೀಗಾಗಿ ಈಗ ಏಕಕಾಲಕ್ಕೆ 9 ಸಾವಿರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಮುಂದಾಗಿದ್ದು,ಈ ಪೈಕಿ 1 ಸಾವಿರ ಜನರನ್ನ ಅನುಕಂಪದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.

ಅಪಘಾತ ರಹಿತ ಹಾಗೂ ಅಪರಾಧ ರಹಿತ ಕಾರ್ಯ ಸಾಧಿಸಿದ ಚಾಲಕರಿಗೆ ಬೆಳ್ಳಿ ಪದಕ ವಿತರಿಸಲಾಗುತ್ತಿದೆ ಹಾಗೂ ಅಪಘಾತ ವಿಮಾ ಯೋಜನೆಯಡಿ ಮೃತಪಟ್ಟ ನೌಕರರ ಕುಟುಂಬಸ್ಥರಿಗೆ ರೂ.1 ಕೋಟಿ ವಿಮೆಯನ್ನು ವಿತರಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆ ಉಚಿತ ಪ್ರಯಾಣ ನೀಡುವ ಮೂಲಕ ದಾಖಲೆ ಮಾಡಿದೆ. ಸರ್ಕಾರದ ಯಶಸ್ವಿ ಕಾರ್ಯಕ್ರಮಗಳು ಮುಂದುವರೆಯಲಿವೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ 127 ನೂತನ ಬಸ್‌ಗಳ ಲೋಕಾರ್ಪಣೆ, ಅಪಘಾತ /ಅಪರಾಧ ರಹಿತ ಸೇವೆ ಸಲ್ಲಿಸಿದ ಸಂಸ್ಥೆಯ ಚಾಲಕರಿಗೆ “ಬೆಳ್ಳಿ ಪದಕ” ವಿತರಣೆ. “ಸಾರಿಗೆ ಸಂಜೀವಿನಿ” ಯೋಜನೆಯಡಿ ಕಾರವಾರ/ಬೆಳಗಾವಿ/ಗದಗ ಸರ್ಕಾರಿ ವಿಜ್ಞಾನ ಸಂಸ್ಥೆಗಳೊಂದಿಗೆ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಚಾಲನೆ ನೀಡಲಾಯಿತು.

ಅಲ್ಲದೆ “ವಾಯವ್ಯ ಸಾರಿಗೆ ಸಂಪದ” ಡಿಜಿಟಲ್ ತ್ರೈಮಾಸಿಕ ಪತ್ರಿಕೆಯ ಬಿಡುಗಡೆ. ಮೃತಪಟ್ಟ ಸಂಸ್ಥೆಯ ನೌಕರರ ಅವಲಂಬಿತರಿಗೆ ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯ ರೂ 5 ಲಕ್ಷ ಮೊತ್ತದ ಚೆಕ್ ವಿತರಣೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಸಂಸ್ಥೆಯಲ್ಲಿ ಮೃತಪಟ್ಟ ನೌಕರರ ಅವಲಂಬಿತರಿಗೆ ರೂ 50 ಲಕ್ಷದ ಮೊತ್ತದ ಅಪಘಾತ ವಿಮಾ ಯೋಜನೆಯ ಚೆಕ್‌ ವಿತರಣೆ. ನೌಕರರು ಭವಿಷ್ಯ ನಿಧಿ ಮುಂಗಡಕ್ಕೆ ಅರ್ಜಿ ಸಲ್ಲಿಸುವ ಮತ್ತು ವಾಣಿಜ್ಯ ಮಳಿಗೆಗಳ ಬಾಡಿಗೆ ಮೊತ್ತವನ್ನು UPI ಮೂಲಕ ಪಾವತಿಸುವ ತಂತ್ರಾಂಶಗಳ ಚಾಲನೆ.

ನೂತನ ಕಿರಿಯ ಸಹಾಯಕ ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ಪತ್ರಗಳ ವಿತರಣೆ. 2024-25 ನೇ ಸಾಲಿನ ಅಂತರ ವಿಭಾಗೀಯ ಕ್ರೀಡಾ ಮತ್ತು ಕಲಾ ಚಟುವಟಿಕೆಗಳಲ್ಲಿ ವಿಜೇತರಿಗೆ ಪಾರಿತೋಷಕ ವಿತರಣೆ.

2023-24 ನೇ ಸಾಲಿನಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪುರಸ್ಕಾರ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಪ್ರಭು ಜಿಆರ್‌ಜೆ, ಇಲಾಖೆಯ ಅಧಿಕಾರಿಗಳು, ಸಾರಿಗೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!