PM vs CM: ನಿಮ್ಮ ಸುಳ್ಳುಗಳನ್ನು ಸಾಬೀತು ಮಾಡಿ.. ಇಲ್ಲಾ ರಾಜಕೀಯ ನಿವೃತ್ತಿ ಸ್ವೀಕರಿಸಿ: ಮಹಾರಾಷ್ಟ್ರದಲ್ಲಿ PMಗೆ ಮತ್ತೆ ಸವಾಲೆಸದ ಕರ್ನಾಟಕ CM

ಮಂಗಳ್ ವೇಡ (ಮಹಾರಾಷ್ಟ್ರ): PM vs CM ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಪಂಡರಪುರ ಮಂಗಳ್ ವೇಡಾ ದಲ್ಲಿ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು.

ಪಂಡರಪುರ ಮಂಗಲ್ ವೇಡ ಪಾಂಡುರಂಗ, ವಿಠ್ಠಲ ಭಗವಾನ್ ಅವರ ಮೌಲ್ಯಗಳನ್ನು ಆಚರಿಸುವ ಅತ್ಯಂತ ಪವಿತ್ರವಾದ ಸ್ಥಳ ಎಂದರು.

ಶರಣ ಬಸವೇಶ್ವರರು 14 ವರ್ಷ ಮಂತ್ರಿಯಾಗಿದ್ದ ಸ್ಥಳ ಪಂಡರಪುರ ಮಂಗಳ್ ವೇಡಾ. ಜಾತಿ ತಾರತಮ್ಯ ಹೋಗಲಾಡಿಸಲು, ಮನುಷ್ಯ ತಾರತಮ್ಯ ನಿವಾರಿಸಲು ಬಸವೇಶ್ವರರು ಲಿಂಗಾಯತ ಧರ್ಮವನ್ನು ಸ್ಥಾಪಿಸಿದರು. ಇಂಥಾ ಪವಿತ್ರವಾದ ಸ್ಥಳದಲ್ಲಿ ಬಿಜೆಪಿ ಗೆಲ್ಲಬಾರದು ಎಂದರು.

ಜವಾಹರಲಾಲ್ ಅವರಿಂದ ಮನ‌ಮೋಹನ್ ಸಿಂಗ್ ಅವರ ವರೆಗೂ ಕಾಂಗ್ರೆಸ್ಸಿನ ಎಲ್ಲಾ ಪ್ರಧಾನಿಗಳು ಅಂಬೇಡ್ಕರ್ ಅವರ ಆಶಯಕ್ಕೆ ತಕ್ಕಂತೆ ಸಾಮಾಜಿಕ ನ್ಯಾಯದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ ಬಹುತ್ವದ ಚರಿತ್ರೆ ಹೊಂದಿದ್ದಾರೆ ಎಂದರು.‌

ದೇಶದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುತ್ತಾ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಶ್ರೀಮಂತ ಮತ್ತು ಮೇಲ್ವರ್ಗದವರ ಪಕ್ಷವಾಗಿದ್ದು ಈ ಕಾರಣಕ್ಕೇ ಬಿಜೆಪಿ ಬಡವರ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಕೇವಲ ಅಂಬಾನಿ ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡಿದರೇ ಹೊರತು ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಮವನ್ನೂ ರೂಪಿಸಲಿಲ್ಲ. ನಿಮ್ಮ ಮನೆ ಬಾಗಿಲಿಗೆ ತರಲಿಲ್ಲ. ಬದಲಿಗೆ ಪೆಟ್ರೋಲ್, ಡೀಸೆಲ್, ಗ್ಯಾಸ್, ಕಾಳು, ಬೇಳೆ ಎಲ್ಲದರ ಬೆಲೆ ಏರಿಸಿದರು.

ಅಚ್ಛೇ ದಿನ್ ಆಯೆಗಾ ಎಂದರು. ಕಹಾಂ ಹೈ ಅಚ್ಛೆ ದಿನ್ ? ಬೆಲೆ ಏರಿಕೆಗೆ ಬ್ರೇಕ್ ಹಾಕುವುದಾಗಿ ಭಾಷಣ ಮಾಡಿದರು. ಆದರೆ ಬೆಲೆ ಏರಿಕೆ ಮುಗಿಲು ಮುಟ್ಟಿದೆ ಎಂದರು.

ಭಾರತದ ರೈತರು ಸಾಲ ಮನ್ನಾ ಮಾಡಿ ಎಂದು ಮೋದಿಯವರಿಗೆ ಕೇಳಿದರೆ, ಈ ಮೋದಿ ಅವರು ರೈತರ ಒಂದೇ ಒಂದು ರೂಪಾಯಿ ಸಾಲ ಮನ್ನಾ ಮಾಡಲಿಲ್ಲ. ಬದಲಿಗೆ ಕಾರ್ಪೋರೇಟ್ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಭಾರತದ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು.

ನಾನು ಮೊದಲ ಬಾರಿ ಕರ್ನಾಟಕದ ಮುಖ್ಯಮಂತ್ರಿ ಆದಾಗ ರೈತರ ಸಾಲ ಮನ್ನಾ ಮಾಡಿದೆ. ಬಿಜೆಪಿಯವರಿಗೆ ರೈತರ ಸಾಲ ಮನ್ನಾ ಮಾಡಿ ಎಂದರೆ, ನಮ್ಮ ಬಳಿ ನೋಟು ಪ್ರಿಂಟ್ ಹಾಕುವ ಯಂತ್ರ ಇಲ್ಲ ಅಂದರು. ಹೌದು ಬಿಜೆಪಿಯವರ ಮನೆಯಲ್ಲಿ ಇರುವುದು ನೋಟು ಎಣಿಸುವ ಯಂತ್ರ ಮಾತ್ರ ಎಂದು ವ್ಯಂಗ್ಯವಾಡಿದರು.

ಮಹಾರಾಷ್ಟ್ರದಲ್ಲಿ ಮೋದಿಗೆ ಮತ್ತೊಮ್ಮೆ ಸವಾಲೆಸೆದ ಸಿದ್ದರಾಮಯ್ಯ

ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಮುಂದೆಯೂ ಬರೋದಿಲ್ಲ.

ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಚುನಾವಣೆ ನಡೆಸುತ್ತಿದೆ ಎನ್ನುವ ಹಸಿ ಹಸಿ ಸುಳ್ಳನ್ನು ಇದೇ ಮಹಾರಾಷ್ಟ್ರದಲ್ಲಿ ಮೋದಿ ಹೇಳಿದ್ದಾರೆ. ಮೋದಿಯವರೇ ನಾನು ನೀವು ಸುಳ್ಳು ಭಾಷಣ ಮಾಡಿದ ಮಹಾರಾಷ್ಟ್ರಕ್ಕೇ ಬಂದು ನಿಮಗೆ ನೇರ ಸವಾಲು ಹಕುತ್ತಿದ್ದೇನೆ. ನಿಮ್ಮ ಭಾಷಣದ ಸುಳ್ಳನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ದ. ಇಲ್ಲದಿದ್ದರೆ ನೀವು ರಾಜಕೀಯ ನಿವೃತ್ತಿ ಘೋಷಿಸುತ್ತೀರಾ ಎಂದು ಸವಾಲು ಹಾಕಿದರು.

ನಿಮಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ಇದ್ದರೆ ನನ್ನ ಸವಾಲನ್ನು ಸ್ವೀಕರಿಸಿ ಎಂದು ಮೋದಿಯವರಿಗೆ ಕರೆ ನೀಡಿದರು.

ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಶಾಸಕರನ್ನು ಖರೀಧಿಸಿದರಲ್ಲಾ ಅದಕ್ಕೆಲ್ಲಾ ಅಷ್ಟು ಕೋಟಿ ಕೋಟಿ ಹಣ ಎಲ್ಲಿಂದ ಬಂತು ನಿಮಗೆ? ಮಹಾರಾಷ್ಟ್ರ ಜನತೆಗೆ ಉತ್ತರಿಸಿ ಎಂದು ಮತ್ತೊಂದು ಸವಾಲು ಎಸೆದರು.

ಏಕನಾಥ್ ಶಿಂಧೆ ಮಹಾರಾಷ್ಟ್ರ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಲಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರು. ಈ ಆಪರೇಷನ್ ಗೆ ಬಳಸಿದ ಹಣ ಯಾವುದು? ಭ್ರಷ್ಟಾಚಾರದ್ದು ಅಲ್ವಾ? ಆ ಹಣ ಎಲ್ಲಿಂದ ಬಂತು ಎಂದು ಮಹಾರಾಷ್ಟ್ರ ಜನರಿಗೆ ಹೇಳಬಲ್ಲಿರಾ ಎಂದು ಪ್ರಶ್ನಿಸಿದರು.

ಕರ್ನಾಟಕ ಜನ ತಿರಸ್ಕರಿಸಿದರು- ಮಹಾರಾಷ್ಟ್ರ ಜನರ ಸರದಿ ಈಗ

ಆಪರೇಷನ್ ಕಮಲದ ಬಿಜೆಪಿಯ ಹೊಲಸು ಸಂಸ್ಕಾರವನ್ನು ಕರ್ನಾಟಕ ಜನತೆ ತಿರಸ್ಕರಿಸಿದ್ದಾರೆ. ಈಗ ಮಹಾರಾಷ್ಟ್ರ ಜನತೆಯ ಸರದಿ. ನೀವೂ ಆಪರೇಷನ್ ಕಮಲದ ಸಂಸ್ಕಾರವನ್ನು ತಿರಸ್ಕರಿಸಿ ಸೆಡ್ಡು ಹೊಡೆಯಿರಿ ಎಂದು ಕರೆ ನೀಡಿದರು.

ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿ ಆಗದೆ ಕಾಂಗ್ರೆಸ್ ಕರ್ನಾಟಕ ಜನತೆಗೆ ವಂಚಿಸಿದ್ದಾಗಿ ಮಹಾರಾಷ್ಟ್ರ ಬಿಜೆಪಿ ಸುಳ್ಳು ಜಾಹಿರಾತು ನೀಡಿದೆ. ಇವರಿಗೆ ನಾಚಿಕೆ ಇಲ್ಲ.

ಬಿಜೆಪಿಯ ಮೋದಿ ಮತ್ತು ಸುಳ್ಳಿನ ಸರದಾರರೇ ಕರ್ನಾಟಕಕ್ಕೆ ಬಂದು ನೋಡಿ. ನಿಮಗೆ ವಿಶೇಷ ವಿಮಾನದ ವ್ಯವಸ್ಥೆ ನಾನೇ ಮಾಡ್ತೀನಿ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿ ಆಗಿಲ್ಲ ಎಂದರೆ ನಾನು ರಾಜೀನಾಮೆ ಕೊಡ್ತೀನಿ. ನಮ್ಮ ನೆಲದಲ್ಲಿ ಗ್ಯಾರಂಟಿಗಳು ಜಾರಿ ಆಗಿರುವುದು ಸತ್ಯ ಆದರೆ ನಿಮ್ಮ ಸುಳ್ಳುನ ಜಾಹಿರಾತನ್ನು ವಾಪಾಸ್ ಪಡೆದು ಮಹಾರಾಷ್ಟ್ರ ಜನತೆಯ ಕ್ಷಮೆ ಕೇಳಬೇಕು. ಈ ಸವಾಲು ಸ್ವೀಕರಿಸುತ್ತೀರಾ ಎಂದು ಸವಾಲು ಹಾಕಿದರು.

ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ನನ್ನ ರಾಜ್ಯದ ಕೋಟಿ ಕೋಟಿ ಜನರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ.

ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇಲ್ಲೂ ಮಹಾ ಆಘಾಡಿ ಅಧಿಕಾರಕ್ಕೆ ಬಂದು ಎಲ್ಲಾ ಭರವಸೆಗಳನ್ನು ಈಡೇರಿಸುವುದು ಶತಸಿದ್ದ. ಏಕೆಂದರೆ ನುಡಿದಂತೆ ನಡೆದ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದರು.

ಮಹಾ ವಿಕಾಸ್ ಆಘಾಡಿ ಮಾತ್ರ ಕೊಟ್ಟ ಭರವಸೆಗಳನ್ನು ಈಡೇರಿಸಿ ಮಹಾರಾಷ್ಟ್ರ ಜನರ ಬದುಕಿಗೆ ಆರ್ಥಿಕ ಶಕ್ತಿ ನೀಡುತ್ತದೆ. ಆದ್ದರಿಂದ ಬಿಜೆಪಿ ಸೋಲಿಸಿ ಆರ್ಥಿಕ ಶಕ್ತಿ ಪಡೆಯಿರಿ ಎಂದು ಕರೆ ನೀಡಿದರು.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಸಂಸದೆ ಪ್ರಣತಿ ಶಿಂಧೆ, ಸಚಿವರಾದ ಎಂ.ಪಿ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಮಹಾಲಿಂಗರಾಯ ಸನ್ನಿಧಿಯಲ್ಲಿ ಯಾತ್ರಿ ನಿವಾಸ

ಲಕ್ಷಾಂತರ ಭಕ್ತರ ಸನ್ನಿಧಿಯಾಗಿರುವ ಮಂಗಳವೇಡಾ ಮಹಾಲಿಂಗರಾಯ ಕ್ಷೇತ್ರಕ್ಕೆ ಬರುವ ಭಕ್ತರಿಗಾಗಿ ರಾಜ್ಯ ಸರ್ಕಾರ ಯಾತ್ರಿ ನಿವಾಸ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಮಹಾರಾಷ್ಟ್ರ ಬಿಜೆಪಿ ವಿರುದ್ಧ ಕೇಸು ದಾಖಲಿಸಿ ಪಾಠ ಕಲಿಸುತ್ತೇವೆ

ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹಿರಾತನ್ನು ಪುಟಗಟ್ಟಲೆ ನೀಡಿದ್ದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!