Millet price; ರಾಗಿಗೆ ಬೆಂಬಲ ಬೆಲೆ ನಿಗದಿ: ನೋಂದಣಿ ಪ್ರಕ್ರಿಯೆ ದಿನಾಂಕ ಪ್ರಕಟ.. ಖರೀದಿ ಕೇಂದ್ರಗಳ ಮಾಹಿತಿ ಇಲ್ಲಿದೆ..

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ (Millet price) ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ರೈತರಿಂದ ರಾಗಿ ಖರೀದಿಸಲು ಪೂರ್ವ ಸಿದ್ಧತಾ ಕ್ರಮಗಳ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಪಾಯಿಗಳು ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ. ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿ ತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆ ಸಂಬಂಧಿಸಿದಂತೆ ನೋಂದಣಿ ಪ್ರಕ್ರಿಯೆಗೆ ನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು.

ಖರೀದಿ ಕೇಂದ್ರಗಳ ನೋಂದಣಿಗೆ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್ ಗಳು, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ, ರೈತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಕೃಷಿ ಮಾರುಕಟ್ಟೆ ಮತ್ತು ಎ.ಪಿ.ಎಂ.ಸಿ ಅಧಿಕಾರಿಗಳಿಗೆ ಸೂಚಿಸಿದರು.

ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು ಜನವರಿ ಮಾಹೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಶುರುವಾಗಲಿದೆ. ಹಾಗಾಗಿ ರೈತರಿಂದ ಖರೀದಿಸಿದ ರಾಗಿಯನ್ನು ಕ್ರೂಡಿಕರಿಸಿ ಶೇಖರಿಸಲು ಉಗ್ರಾಣಗಳು ವ್ಯವಸ್ಥಿತ ಗುಣಮಟ್ಟದಲ್ಲಿ ಇದೆಯೇ ಎಂದು ಪರಿಶೀಲಿಸಿ, ಅವಶ್ಯವಿದ್ದಲ್ಲಿ ಹೆಚ್ಚುವರಿ ಉಗ್ರಾಣಗಳನ್ನು ನಿಗದಿ ಪಡಿಸಿ ಎಂದರು.

ಇದನ್ನೂ ಓದಿ; garlic theft: ಬೆಳ್ಳುಳ್ಳಿ ಕಳ್ಳತನ ಮಾಡಿಕೊಂಡು ಹೋದ ಕಿಲಾಡಿಗಳು..!

ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ನೋಂದಾಯಿಸಿಕೊಂಡು, ಫ್ರೂಟ್ಸ್ ಐಡಿ ಪಡೆದಿರಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಫ್ರೂಟ್ಸ್ ಐಡಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಜಿ.ಶಂಕರಮೂರ್ತಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಕಲಾವತಿ, ಉಪನಿರ್ದೇಶಕಿ ಗಾಯಿತ್ರಿ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು ಮತ್ತು ಇತರರು ಉಪಸ್ಥಿತರಿದ್ದರು.

ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು

ನೆಲಮಂಗಲ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.

ದೊಡ್ಡಬಳ್ಳಾಪುರ: ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್.

ದೇವನಹಳ್ಳಿ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕುರುಬರ ದೊಡ್ಡಿ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ದೇವನಹಳ್ಳಿ.

ಹೊಸಕೋಟೆ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!