agriculture: ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ; ಸಚಿವ ಎನ್‌. ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ (agriculture) ಇಲಾಖೆಯ ಪ್ರಮುಖ ಆಧಾರ ಸ್ತಂಭಗಳಾದ ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ/ ಪರತಂತ್ರ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿಯನ್ನು ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಸಚಿವರು ಮಾಹಿತಿ ನೀಡಿದರು.

ಬೆಳೆಗಳಲ್ಲಿ ಕಂಡುಬರುವ ಕೀಟ/ ರೋಗ ಬಾಧೆ ಹಾಗೂ ಪೋಷಕಾಂಶಗಳ ಕೊರತೆಯನ್ನು ನಿಖರವಾಗಿ ಗುರುತಿಸಿ, ಪೀಡೆ ಬಾಧೆಯ ತೀವ್ರತೆಗನುಗುಣವಾಗಿ ನಿರ್ವಹಣಾ ಕ್ರಮಗಳನ್ನು ರೈತರಿಗೆ ತಲುಪಿಸಲು ಇ-ಸ್ಯಾಪ್‌ ತಂತ್ರಜ್ಞಾನವನ್ನು ಜಾರಿಗೊಳಿಸಿ ಇಲ್ಲಿಯವರೆಗೆ 70,016 ರೈತರಿಗೆ 1,30,152 ವಿವಿಧ ತಾಂತ್ರಿಕ ಸಲಹೆಗಳನ್ನು ನೀಡಲಾಗಿದೆ ಎಂದು ಸಚಿವರು ಹೇಳಿದರು.

ಮಣ್ಣು ಪರೀಕ್ಷೆಗೆ ಭೂಸಾರ ಆಪ್‌ ತಂತ್ರಾಂಶ ಬಳಸಿ 4.76 ಲಕ್ಷ ಮಣ್ಣು ಮಾದರಿಗಳ ಗುರಿಗೆ ಇಲ್ಲಿಯವರೆಗೆ 4.54 ಲಕ್ಷ ಮಣ್ಣು ಮಾದರಿಗಳನ್ನು ಸಂಗ್ರಹಿಸಿದ್ದು, 2.30 ಲಕ್ಷ ಮಣ್ಣು ಮಾದರಿಗಳನ್ನು ವಿಶ್ಲೇಷಿಸಿ 1.58 ಲಕ್ಷ ಮಣ್ಣು ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿರುತ್ತದೆ.

ರಾಜ್ಯದಲ್ಲಿನ 29 ಮಣ್ಣು ಆರೋಗ್ಯ ಕೇಂದ್ರಗಳ ಪೈಕಿ 26 ಕೇಂದ್ರಗಳಿಗೆ NABL recognition ಪಡೆಯಲಾಗಿದೆ ಎಂದು ಹೇಳಿದರು.
ಕೇಂದ್ರ ಪುರಸ್ಕೃತ ಯೋಜನೆಗಳಡಿ 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ರೂ.297 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಪಡೆಯಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಬಿತ್ತನೆ ಬೀಜ ವಿತರಣೆ ಹಾಗೂ ರಸಗೊಬ್ಬರ ಪೂರೈಕೆಯನ್ನು ಯಾವುದೇ ಕೊರತೆ ಮತ್ತು ದೂರು ಇಲ್ಲದಂತೆ ನಿರ್ವಹಿಸಲಾಗಿದೆ. 2023-24ನೇ ಸಾಲಿನಲ್ಲಿ 13 ಲಕ್ಷ ರೈತರಿಗೆ 5.77 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ವಿತರಣೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 12.92 ಲಕ್ಷ ಫಲಾನುಭವಿಗಳಿಗೆ 6.11ಕ್ವಿಂಟಾಲ್‌ ಬಿತ್ತನೆ ಬೀಜಗಳನ್ನು ಇಲ್ಲಿಯವರೆಗೆ ವಿತರಣೆ ಮಾಡಲಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ 46,000 ಕ್ವಿಂಟಾಲ್‌ ಹೆಚ್ಚುವರಿ ಬಿತ್ತನೆ ಬೀಜವನ್ನು ಸಹಾಯಧನದಡಿಯಲ್ಲಿ ವಿತರಿಸಲಾಗಿದೆ. ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರಿಗೆ, ಮಾರುಕಟ್ಟೆದಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಸಂಪರ್ಕವನ್ನು ವಿಸ್ತರಿಸಲು ಮತ್ತು ಆರೋಗ್ಯವನ್ನು ಸುಧಾರಿಸಲು ಸಾವಯವ ಮತ್ತು ಸಿರಿಧಾನ್ಯ ಹಬ್‌ ನ್ನು ಹೆಬ್ಬಾಳ, ಬೆಂಗಳೂರಿನಲ್ಲಿ ರೂ.20.00 ಕೋಟಿ ಅನುದಾನದಲ್ಲಿ ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ನೀಡಿದೆ ಎಂದು ಕೃಷಿ ಸಚಿವರು ತಿಳಿಸಿದರು.

2023-24ನೇ ಸಾಲಿನಲ್ಲಿ 3.07 ಲಕ್ಷ ರೈತರಿಗೆ 3.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ/ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ರೂ. 627.10 ಕೋಟಿ ಸಹಾಯಧನವನ್ನು ನೀಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 109250 ರೈತ ಫಲಾನುಭವಿಗಳಿಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನ ನೀಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

2023-24ನೇ ಸಾಲಿನಲ್ಲಿ ಕೃಷಿಯಲ್ಲಿ ಯಾಂತ್ರೀಕತೆಯನ್ನು ಪ್ರೋತ್ಸಾಹಿಸಲು ಅನುವಾಗುವಂತೆ ರೂ.433.92 ಕೋಟಿಗಳ ವೆಚ್ಚದಲ್ಲಿ 1,16,181 ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 20301 ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ವಿತರಣೆ ಮಾಡಲಾಗಿದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ ಯೋಜನೆಯಡಿ 2023-24ನೇ ಸಾಲಿನಲ್ಲಿ 104 ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ರೂ.41.39 ಕೋಟಿಗಳ ಸಹಾಯಧನ ನೀಡಲಾಗಿದ್ದು, 2024-25ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ರೂ. 45.00 ಕೋಟಿಗಳ ಅನುದಾನದಲ್ಲಿ ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿವಿಧ ಕೃಷಿ ಬೆಳೆಗಳನ್ನು 82.48 ಲಕ್ಷ ಹೆಕ್ಟೇರ್ ಗುರಿಗೆ 81.36 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.99 ರಷ್ಟು ಬಿತ್ತನೆಯಾಗಿರುತ್ತದೆ. ದಿನಾಂಕ:15.11.2024 ವರೆಗೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳ ಪ್ರಸ್ತಾವಿತ ಬಿತ್ತನೆ ಗುರಿ 25.53 ಲಕ್ಷ ಹೆಕ್ಟೇರ್ ಪ್ರತಿಯಾಗಿ 13.38 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.52ರಷ್ಟು ಬಿತ್ತನೆಯಾಗಿದ್ದು ಡಿಸೆಂಬರ್ವರೆಗೂ ಬಿತ್ತನೆಯಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 17.61 ಲಕ್ಷ ರೈತ ಫಲಾನುಭವಿಗಳಿಗೆ ರೂ.2021.17 ಕೋಟಿಗಳ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಪ್ರಸಕ್ತ ಮುಂಗಾರು 2024ರ ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೇಕ್ಟೆರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್‌ ಪ್ರದೇಶಕ್ಕೆ ನೋಂದಣಿಯಾಗಿದ್ದು ನೋಂದಣಿ ಕಾರ್ಯವು ಪ್ರಗತಿಯಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ರಾಷ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಯೋಜನೆ: ದ್ವಿದಳ ಧಾನ್ಯ ಪ್ರಾತ್ಯಕ್ಷಿಕೆಗಳಿಗೆ 2024-25ನೇ ಸಾಲಿನಲ್ಲಿ 121.56 ಕೋಟಿ ಹಾಗೂ ಹೆಚ್ಚುವರಿ ಅನುದಾನ 63.42ಕೋಟಿ ಒಳಗೊಂಡಂತೆ ಒಟ್ಟು 184.98ಕೋಟಿ ಅನುದಾನದಲ್ಲಿ ದ್ವಿದಳ ಧಾನ್ಯ ವಿಸ್ತೀರ್ಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ರಾಷ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಯೋಜನೆ: ದ್ವಿದಳ ಧಾನ್ಯ ಕಾರ್ಯಕ್ರಮದಡಿ 100ಹೆಕ್ಟೇರ್ ಪ್ರದೇಶದಂತೆ ಗುಚ್ಚ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು 75,500 ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯಗಳ ನೂತನ ತಾಂತ್ರಿಕತೆಗಳ ಪರಿಚಯಗಳ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲಾಗಿದೆ ಅಲ್ಲದೇ ಬೆಳೆ ಸಾಂದ್ರತೆ (Croping Intensity) : ಶೇ.100ರಿಂದ ಶೇ.175ರಷ್ಟು ಹೆಚ್ಚಳವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತರು ವೈ.ಎಸ್.ಪಾಟೀಲ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮಹೇಶ್ ಶಿರೂರು, ನಿರ್ದೇಶಕ ಬಂತನಾಳ, ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರು ದೇವರಾಜು ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು

[ccc_my_favorite_select_button post_id="115587"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!