Doddaballapura: ದೇವರಾಜ್ ಅರಸ್ ಅಂತರಾಷ್ಟ್ರೀಯ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮ

ದೊಡ್ಡಬಳ್ಳಾಪುರ (Doddaballapura); ಜೀವನದಲ್ಲಿ ಕ್ರೀಡೆಯನ್ನು ರೂಡಿಸಿಕೊಂಡು ಪ್ರತಿ ದಿನ ಅಭ್ಯಾಸ ಮಾಡಿದರೆ ಜಯ ಎಂಬುದು ತಾನಾಗಿ ಲಭಿಸುತ್ತದೆ ಎಂದು ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಆರ್ಯ ಎಸ್ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇಲ್ಲಿನ ಶ್ರೀ ದೇವರಾಜ್ ಅರಸ್ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ಇಂದು ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಯಶಸ್ಸು ದೊರಕಲು ನಿರಂತರ ಅಭ್ಯಾಸ ಅಗತ್ಯ. ಸೋಲಿನಿಂದ ಹತಾಶರಾಗದೆ ಗೆಲುವಿನ ಗುರಿಯೆಡೆಗೆ ಪ್ರಯತ್ನ ನಿರಂತರವಾಗಿರಬೇಕು ಎಂದರು.

ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಇಂದಿನ ಯುವ ಪೀಳಿಗೆ ಮೊಬೈಲ್ ಫೋನ್ಗಳನ್ನು ಮಿತಿ ಮೀರಿ ಬಳಸುತ್ತಿದ್ದು, ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ತುಂಬಾ ಹಿನ್ನಡೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸದೃಢವಾದ ದೇಹವುಳ್ಳವನಿಗೆ ಸದೃಢವಾದ ಮನಸ್ಸಿರುತ್ತದೆ. ಆದ್ದರಿಂದ ಯುವ ಜನತೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಗಮನ ನೀಡಬೇಕಿದೆ. ಶಾಲೆಯ ಮಕ್ಕಳು ಕೇವಲ ಪುಸ್ತಕಕ್ಕೆ ಸೀಮಿತವಾಗಿರದೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿರಬೇಕೆಂಬುದು ದಿ.ಆರ್.ಎಲ್.ಜಾಲಪ್ಪ ಅವರ ಕನಸಾಗಿದ್ದು, ಈ ಹಿನ್ನೆಲೆಯಲ್ಲಿ ಆಟದ ಮೈದಾನ ಮಾಡಿದರು ಎಂದು ಸ್ಮರಿಸಿದರು.

ಶ್ರೀ ದೇವರಾಜ್ ಅಂತರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಧನಂಜಯ್ ಜಿ.ಎನ್ ಮಾತನಾಡಿ, ಶೈಕ್ಷಣಿಕ ಚಟುವಟಿಕೆಯಂತೆಯೇ,‌ ಕ್ರೀಡೆಗಳಿಗೂ ಕೂಡ ನಮ್ಮ ಶಾಲೆಯಲ್ಲಿ ಮುಕ್ತವಾದ ವಾತಾವರಣ, ಅಗತ್ಯ ಸೌಲಭ್ಯವಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿಹೆಚ್ ನಾಗರಾಜ್, ಆರ್‌ಎಲ್ ಜಾಲಪ್ಪ ಲಯನ್ಸ್ ಕ್ಲಬ್ ಅಧ್ಯಕ್ಷ ರಾಕೇಶ್, ದೇವರಾಜ್ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶಪ್ಪ, ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿಯವುಲ್ಲಾ ಖಾನ್, ವ್ಯವಸ್ಥಾಪಕ ರವಿಕುಮಾರ್.

ಆರ್ ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ದಾದಾಪೀರ್, ದೇವರಾಜ್ ಅರಸ್ ಪ್ರಥಮ ದರ್ಜೆ ಕಾಲೇಜು ಹಾಗೂ ದೇವರಾಜ್ ಅರಸ್ ಅಂತರಾಷ್ಟ್ರೀಯ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಧು, ಲಿಂಗರಾಜ್, ಶ್ರೀನಿವಾಸ್, ಆನಂದ್ ಸೇರಿದಂತೆ ಬೋಧಕ ಹಾಗೂ ಬೋಧಕ್ಕೆತರ ಸಿಬ್ಬಂದಿಗಳು ಹಾಜರಿದ್ದರು.

ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ರಾಜಕೀಯ

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಗೆ ಪ್ರಯಾಣ: ಕಾರಣ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನೀವು ಮತ್ತು ಸಿದ್ದರಾಮಯ್ಯ ಅವರು ದುಬಾರಿ ವಾಚ್ ಧರಿಸಿದ್ದರ ಬಗ್ಗೆ ಬಿಜೆಪಿ ಟೀಕೆ ಮಾಡುತ್ತಿದೆ ಎಂದು ಕೇಳಿದಾಗ, “ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ

[ccc_my_favorite_select_button post_id="116998"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!