BPL ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ: ಆರ್‌.ಅಶೋಕ ಎಚ್ಚರಿಕೆ

ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ BPL ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು.

ಜಯನಗರದ ಅರಸು ಕಾಲೋನಿಯಲ್ಲಿ ರೇಷನ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಅವರು ಭೇಟಿ ಮಾಡಿದರು.

ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಎಂದು ಹೇಳಿ ಕನ್ನಭಾಗ್ಯ ಕೊಟ್ಟಿದ್ದಾರೆ. ಅನ್ನವನ್ನು ಕದ್ದು ಲಕ್ಷಾಂತರ ಜನರಿಗೆ ಅನ್ಯಾಯ ಮಾಡಿದ್ದಾರೆ. ಅರಸು ಕಾಲೋನಿಯಲ್ಲಿ 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆ, ಈಗ ಅರ್ಹತೆ ಕಳೆದುಕೊಂಡಿದ್ದಾರೆ. ಅಂಕಿ ಅಂಶದ ಪ್ರಕಾರ, 250 ಸರ್ಕಾರಿ ನೌಕರರ ಬಳಿ ರೇಷನ್‌ ಕಾರ್ಡ್‌ ಇದ್ದರೂ, 12 ಲಕ್ಷ ಜನರ ಕಾರ್ಡ್‌ ರದ್ದು ಮಾಡಲು ಸರ್ಕಾರ ಮುಂದಾಗಿದೆ.

ಏನೂ ಭಯ ಬೇಡವೆಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಆಹಾರ ಸಚಿವರು ಮತ್ತೆ ಅರ್ಜಿ ಹಾಕಿ ಎಂದು ಹೇಳುತ್ತಾರೆ. ಕಾಂಗ್ರೆಸ್‌ ನಾಯಕರು ತಪ್ಪು ಮಾಡಿದ ಮೇಲೆ ಜನರು ಯಾಕೆ ಮರಳಿ ಅರ್ಜಿ ಹಾಕಬೇಕು? ಎಂದು ಪ್ರಶ್ನೆ ಮಾಡಿದರು.

ಮರಳಿ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ ಒಂದು ಕಾರ್ಡ್‌ಗೆ 10-15 ಸಾವಿರ ರೂ. ಲಂಚ ನೀಡಬೇಕಾಗುತ್ತದೆ. ಯಾರೂ ಅರ್ಜಿ ಹಾಕಬಾರದು, ಸರ್ಕಾರವೇ ಮರಳಿ ರೇಷನ್‌ ಕಾರ್ಡ್‌ ಕೊಡಬೇಕು. ದೇವಸ್ಥಾನದ ಮುಂದೆ ಹೂ ಮಾರುವವರು, ಸೊಪ್ಪು ಮಾರುವವರ ರೇಷನ್‌ ಕಾರ್ಡ್‌ ರದ್ದುಪಡಿಸಲಾಗಿದೆ. ಇದರ ವಿರುದ್ಧ ಸದನದಲ್ಲಿ ಹಾಗೂ ಹೊರಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.

ಏಕಾಏಕಿ ರೇಷನ್‌ ಕಾರ್ಡ್‌ ರದ್ದು ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚಲು ಕೂಡ ಹಣವಿಲ್ಲ. 20-30 ಸಾವಿರ ಕೋಟಿ ರೂ. ಉಳಿಸಿ, ಶಾಸಕರ ಬಂಡಾಯ ಶಮನಕ್ಕೆ ಬಳಸಲಾಗುತ್ತದೆ ಎಂದು ದೂರಿದರು.

ಸಚಿವರ ಮನೆ ಆಧುನೀಕರಣಕ್ಕೆ 40-50 ಕೋಟಿ ರೂ., ಸಿಎಂ ಮನೆ ನವೀಕರಣಕ್ಕೆ 2 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ಬಡ ಜನರಿಗೆ ಅಕ್ಕಿ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಕೆ.ರಾಮಮೂರ್ತಿ ಉಪಸ್ಥಿತರಿದ್ದರು.

ಅನ್ನ, ಆರೋಗ್ಯದಲ್ಲಿ ಮೋಸ

ಇದೇ ವೇಳೆ ಆರ್‌.ಅಶೋಕ ಅವರು ಸಂಜಯಗಾಂಧಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಕಳೆದ 16 ತಿಂಗಳಲ್ಲಿ ಜನರ ತಲೆಗೆ ಚಪ್ಪಡಿ ಎಳೆಯುವ ಕೆಲಸ ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಹಣ ಕೊರತೆಯಿಂದಾಗಿ ಔಷಧಿ ಖರೀದಿ ಸಾಧ್ಯವಾಗುತ್ತಿಲ್ಲ. ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನ ಕಡಿತ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆಗೂ ಹಣವಿಲ್ಲ. ಇದಕ್ಕಾಗಿ ಸೇವಾ ಶುಲ್ಕವನ್ನು ಏರಿಸಲಾಗಿದೆ. ಅನ್ನ ಮತ್ತು ಆರೋಗ್ಯದ ವಿಚಾರದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ದೂರಿದರು.

ಒಂದು ಕಡೆ ಜಮೀನು ಹೋಗುತ್ತಿದೆ, ಮತ್ತೊಂದು ಕಡೆ ರೇಷನ್‌ ಕಾರ್ಡ್‌ ಹೋಗುತ್ತಿದೆ, ಈಗ ಉಚಿತ ಆರೋಗ್ಯವೂ ದೊರೆಯುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಶುಲ್ಕಗಳನ್ನು ಹೆಚ್ಚು ಮಾಡಿರುವುದೇ ಖಜಾನೆ ಖಾಲಿಯಾಗಿರುವುದಕ್ಕೆ ಸಾಕ್ಷಿ. ಐದು ಗ್ಯಾರಂಟಿಗಳಿಗಾಗಿ ಜನರ ಮೇಲೆ ತೆರಿಗೆ ಹೊರೆ ಹಾಕಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರ ಪ್ರಕಾರ ಇದು ಬಡವರ ಪರವಾದ ಸರ್ಕಾರವೇ? ಎಂದು ಪ್ರಶ್ನಿಸಿದರು.

ಮುಡಾ ಹಗರಣದ ನಂತರ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಜನರ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಲಂಚ ಇದ್ದರೆ ಮಾತ್ರ ವಿಧಾನಸೌಧಕ್ಕೆ ಪ್ರವೇಶ ಎಂಬ ಸ್ಥಿತಿ ಇದೆ. ಆರೋಗ್ಯ ಸೇವೆಯನ್ನು ಸಂಪೂರ್ಣ ಉಚಿತವಾಗಿ ನೀಡಬೇಕು. ಇದರ ಮೇಲೂ ಸರ್ಕಾರ ವಕ್ರದೃಷ್ಟಿ ಬೀರಿದೆ ಎಂದು ಆಕ್ರೋಶ ಹೊರಹಾಕಿದರು.

ರಾಜಕೀಯ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ (Budget) ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್

[ccc_my_favorite_select_button post_id="119957"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!