RAshoka; ವಕ್ಫ್‌ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ ಆಗ್ರಹ

ಬೆಂಗಳೂರು: ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್‌ ಸರ್‌.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಮಂಡಳಿ ಕಬಳಿಸಿದೆ. ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ವಕ್ಫ್‌ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್‌ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್‌ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್‌ಬಾಗ್‌ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ ಎಂದು ದೂರಿದರು.

ಬೌರಿಂಗ್‌ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್‌ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ. ವಕ್ಫ್‌ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗುತ್ತಿದೆ. ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್‌ ಆಗಲು ಮುಂದಾಗಿದ್ದಾರೆ. ಲವ್‌ ಜಿಹಾದ್‌, ಲ್ಯಾಂಡ್‌ ಜಿಹಾದ್‌ ಬಳಿಕ ರೇಷನ್‌ ಕಾರ್ಡ್‌ ಜಿಹಾದ್‌ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್‌ ಕಾರ್ಡ್‌ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್‌ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ. ಸರ್ಕಾರ ತಪ್ಪು ಮಾಡಿದರೆ, ಜನರು ಲಂಚ ಕೊಟ್ಟು ರೇಷನ್‌ ಕಾರ್ಡ್‌ ಮಾಡಿಸಿಕೊಳ್ಳಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲ. ಅದಕ್ಕಾಗಿ ಪ್ರತಿಯೊಂದಕ್ಕೂ ಶುಲ್ಕ ಏರಿಕೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಿಎಂ ಸಿದ್ದರಾಮಯ್ಯ ತೆರಿಗೆ ವಿಧಿಸದ ವಸ್ತುಗಳೇ ಇಲ್ಲ. ಹರಿಯುವ ನದಿಗೂ ತೆರಿಗೆ ವಿಧಿಸಿದ್ದಾರೆ. ಇನ್ನು ಗಾಳಿಗೂ ತೆರಿಗೆ ವಿಧಿಸಬಹುದು. ಸರ್ಕಾರ ಪಾಪರ್‌ ಆಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಡ ಎಂದರು.

ಸಿಎಂ ಸಿದ್ದರಾಮಯ್ಯ ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್‌ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ತಿದ್ದುಪಡಿ ಮಸೂದೆ ಬರಲಿದೆ

ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್‌ಮ್ಯಾನ್‌ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿಯವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!