HDK: ಒಕ್ಕಲಿಗರ ಸಂಘದಲ್ಲಿ ಗುಂಪುಗಾರಿಕೆ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರು: ಸಮಾಜದ ಶ್ರೇಯೋಭಿವೃದ್ಧಿಗಾಗಿ ಉದಾತ್ತ ಚಿಂತನೆಗಳಿಂದ ಜನ್ಮತಾಳಿರುವ ರಾಜ್ಯ ಒಕ್ಕಲಿಗರ ಸಂಘ ಇವತ್ತು ಗುಂಪುಗಾರಿಕೆಯಿಂದ ಸೊರಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ
ಕುಮಾರಸ್ವಾಮಿ (HDK) ಅವರು ಬೇಸರ ವ್ಯಕ್ತಪಡಿಸಿದರು.

ಕೆಂಪೇಗೌಡ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಕೇಂದ್ರ ವೈದ್ಯಕೀಯ ಮಂಡಳಿಯಿಂದ ಹೆಚ್ಚುವರಿಯಾಗಿ 100 ಯುಜಿ ಹಾಗೂ 68 ಪಿಜಿ ಸೀಟುಗಳ ಮಂಜೂರು ಮಾಡಿಸಿಕೊಡುವಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೇಂದ್ರದ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಒಕ್ಕಲಿಗರ ಸಂಘ ಪ್ರತಿದಿನ ಗುಂಪುಗಾರಿಕೆ ಮೂಲಕ ಹೊರಗಡೆ ಸಂಘದ ಬಗ್ಗೆ ಜನ ಲಘುವಾಗಿ ಮಾತನಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ.

ಮೂರು ತಿಂಗಳು, ಆರು ತಿಂಗಳಿಗೆ ಒಮ್ಮೆ ಪದಾಧಿಕಾರಿಗಳನ್ನು ಬದಲಾವಣೆ ಮಾಡಿಕೊಂಡು ಗುಂಪುಗಾರಿಕೆ ನಡೆಸಿದರೆ ಸಂಘದ ಗತಿ ಏನು? ಒಕ್ಕಲಿಗ ಸಮಾಜದ ಮಕ್ಕಳ ಭವಿಷ್ಯದ ಪ್ರಶ್ನೆ ಏನು? ಎಂದು ಖಾರವಾಗಿ ಪ್ರಶ್ನಿಸಿದರು.

ಹಿಂದೆ ನಮ್ಮ ಒಕ್ಕಲು ಸಮಾಜದ ಪೂರ್ವಿಕರು ಸಂಘ ಕಟ್ಟಲು ಪಟ್ಟ ಶ್ರಮ ಏನು ಎಂಬುದನ್ನು ಈಗಿನ ಆಡಳಿತ ಮಂಡಳಿಯಲ್ಲಿರುವ 35 ಜನ ನಿರ್ದೇಶಕರು ಅರ್ಥ ಮಾಡಿಕೊಳ್ಳಬೇಕು. ಬೆಂದ ಮನೆಯಲ್ಲಿ ಗಳ ಇರಿಯುವಂತಹ ಜನರು ಕೂಡ ಸಂಘದಲ್ಲಿ ಸೇರಿಕೊಂಡಿದ್ದಾರೆ.

ಸಂಘಕ್ಕೆ, ಒಕ್ಕಲಿಗ ಸಮಾಜಕ್ಕೆ ಕಿಂಚಿತ್ತು ಒಳ್ಳೆಯದು ಮಾಡಬೇಕು ಎಂಬ ಹಂಬಲ ಹೊಂದಿರುವ ಕೆಲವರು ಕೂಡ ಈ ಸಂಘದಲ್ಲಿ ಇದ್ದಾರೆ. ಆದರೆ, ಸಂಘಕ್ಕೆ ಬಂದರೆ ಸಮಾಜಕ್ಕೆ ಒಳ್ಳೆಯದು ಮಾಡುವ ಬದಲು ಒಂದಷ್ಟು ಸಂಪಾದನೆ ಮಾಡಿಕೊಂಡು ಹೋಗೋಣ ಎಂದು ಸ್ವಾರ್ಥಿಗಳಾಗಿ ಆಲೋಚನೆ ಮಾಡುವ ವ್ಯಕ್ತಿಗಳಿಂದ ಸಮಾಜಕ್ಕೆ ಏನು ಉಪಯೋಗ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ಹೃದಯ ವೈಶಾಲ್ಯತೆ ಇರುವ ಸಮಾಜ ನಮ್ಮದು, ಎಲ್ಲರೂ ನಮ್ಮಂತೆಯೇ ಬದುಕಬೇಕು ಎಂದು ಬಯಸುವ ಸಮಾಜ ನಮ್ಮದು. ಆದರೆ, ನಾವೇ ಮಾಡಿಕೊಳ್ಳುತ್ತಿರುವ ತಪ್ಪುಗಳಿಂದ ನಾವು ಎಲ್ಲೋ ಅಲ್ಪಸಂಖ್ಯಾತರಾಗುತ್ತಿದ್ದೇವೇ ಎನ್ನುವ ಆತಂಕ ನನಗೆ ಉಂಟಾಗಿದೆ ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

ಅಪ್ರಾಮಾಣಿಕತೆ, ಅದಕ್ಷತೆ, ಸ್ವಾರ್ಥದಿಂದ ನಮ್ಮ ಸಮಾಜದ ಪ್ರತಿಷ್ಠೆಗೆ ಧಕ್ಕೆ ಆಗುತ್ತಿದೆ. ನಮ್ಮ ಸಮಾಜದಿಂದಲೇ ಬೆಳೆದು ದೊಡ್ಡವರಾದವರು ನಮ್ಮ ಸಮಾಜಕ್ಕೆ ಕಂಟಕರಾಗಿದ್ದಾರೆ. ಅಂತಹ ಪರಿಸ್ಥಿತಿಗೆ ನಾವೇ ಕಾರಣರಾಗುತ್ತಿದೇವೆ ಎಂದ ಕೇಂದ್ರ ಸಚಿವರು, ಬೆಂಗಳೂರು ನಗರದ ಹೃದಯ ಭಾಗದಲ್ಲಿ ಇಂತಹ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆ ಇದೆ, ರಾಜ್ಯದಲ್ಲಿಯೇ ಅತ್ಯಂತ ಉತ್ತಮ ಆಸ್ಪತ್ರೆ ಆಗಬೇಕಿತ್ತು. ಅಭಿವೃದ್ಧಿ ಆಗಿದೆ, ಆದರೆ ಅದು ಏನೇನಕ್ಕೂ ಸಾಲದು, ಗುಣಮಟ್ಟವೂ ಸಾಲದು. ಇಡೀ ರಾಜ್ಯದಲ್ಲಿಯೇ ನಂಬರ್ ವನ್ ಆಸ್ಪತ್ರೆ ಆಗಬೇಕಿತ್ತು. ಆಗಲಿಲ್ಲ ಯಾಕೆ ಎಂಬುದನ್ನು ನಿರ್ದೇಶಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಕೆ.ಹೆಚ್.ರಾಮಯ್ಯ ಅವರಂಥ ಮಹಾನುಭಾವರು ಸಂಘಕ್ಕೆ ಬುನಾದಿ ಹಾಕಿದರು. ಅನೇಕ ಮಹಾಪುರುಷರು ಸಂಘ ಬೆಳೆಸುತ್ತಾ ಹೋದರು. ಮರೀಗೌಡರು, ಗುತ್ತಲಗೌಡರು ಸಂಘಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿಸಿಕೊಳ್ಳಲು ಕಂಕುಳಲ್ಲಿ ಫೈಲ್ ಗಳನ್ನು ಹಿಡಿದುಕೊಂಡು ಅಲೆಯುತ್ತಿದ್ದ ದಿನಗಳನ್ನು ನಾನು ನೋಡಿದ್ದೇನೆ.

ಅವರಿಬ್ಬರೂ ನಮ್ಮ ತಂದೆಯವರ ಬಳಿಗೆ ಬಂದು ಸಂಘದ ಬಗ್ಗೆ ಚರ್ಚೆ ಮಾಡುತ್ತಿದ್ದನ್ನು ನಾನು ಕಂಡಿದ್ದೇನೆ. ಅಂತಹ ಮಹನೀಯರ ತ್ಯಾಗ, ಬದ್ಧತೆಯ ಬಗ್ಗೆ ಈಗಿನ ಎಲ್ಲಾ ನಿರ್ದೇಶಕರು ಆತ್ಮಾವಲೋಕನ ಮಾಡಿಕೊಳ್ಳಬೇಕು, ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಳ್ಳಿ. ಸಂಘದ ಬಗ್ಗೆ ಜನ ಏನು ಮಾತನಾಡಿಕೊಳ್ಳುತ್ತಿದ್ದಾರೆ ಎಂಬುದು ನಿಮಗೆ ಅರ್ಥ ಆಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೂರು ತಿಂಗಳು, ಆರು ತಿಂಗಳಿಗೊಮ್ಮೆ ಸಂಘದ ಪದಾಧಿಕಾರಿಗಳ ಬದಲಾವಣೆ ಸರಿ ಅಲ್ಲ, ದೇಶ ವಿದೇಶಕ್ಕೆ ಕರೆದುಕೊಂಡು ಹೋಗಿ ಗುಂಪುಗಾರಿಕೆ ಮಾಡಬೇಡಿ. ಇದೆಲ್ಲಾ ಯಾವ ಪುರುಷಾರ್ಥಕ್ಕೆ? ನೀವು ಸಮಾಜಕ್ಕೆ ಏನು ಕೊಡುಗೆ ಕೊಡುತ್ತೀರಿ? ನಿಮ್ಮನ್ನು ನಂಬಿ ಮತ ಹಾಕಿ ಕಳಿಸಿದ ಜನರ ಬಗ್ಗೆ ಆಲೋಚನೆ ಮಾಡಿದ್ದೀರಾ? ಎಂದು ಗುಡುಗಿದರು.

ಕಿಮ್ಸ್ ನಂತಹ ಸಂಸ್ಥೆ ಕಟ್ಟುವುದು ಕಷ್ಟ, ಕೆಡವೋದು ಸುಲಭ. ಇದಕ್ಕೆ ಪೂರಕವಾಗಿ ಮತ್ತೆ ಒಕ್ಕಲಿಗರ ಸಂಘದಲ್ಲಿ ಪದಾಧಿಕಾರಿಗಳ ಬದಲಾವಣೆ ನಾಟಕ ನಡೆಯುತ್ತಿದೆ, ಅದಕ್ಕೆ ತರಾತುರಿಯಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೀರಿ ಎಂದು ನಿರ್ದೇಶಕರ ನಡವಳಿಕೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ಹೆಚ್ಚುವರಿ ಸೀಟು ಕೊಡಿಸಿದ್ದೇವೆ ಎಂದು ನನಗೆ ಅಭಿನಂದನೆ ಬೇಕಿಲ್ಲ, ನನ್ನ ಕರ್ತವ್ಯ ನಾನು ಮಾಡಿದ್ದೇನೆ, ಜೆಪಿ ನಡ್ದಾ ಅವರ ಸಹಕಾರದಿಂದ ಇದು ಸಾಧ್ಯವಾಗಿದೆ. ಅನೇಕರ ಒತ್ತಾಸೆ ಇದರಲ್ಲಿ ಅಡಗಿದೆ. ಹೀಗಿದ್ದರೂ ಈ ಸಂಘದ ಕಾರ್ಯಕ್ರಮಕ್ಕೆ ಬರಲು ನನಗೆ ಮನಸ್ಸಿರಲಿಲ್ಲ, ಸಮಾಜಕ್ಕಾಗಿ ಬಂದಿದ್ದೇನೆ, ಸಮಾಜದ ಮಕ್ಕಳಿಗಾಗಿ ಬಂದಿದ್ದೇನೆ ಎಂದು ಹೇಳಿದರು.

ಬೇರೆ ಸಮಾಜಗಳ ಸಂಘಗಳು ಹೇಗೆ ಕೆಲಸ ಮಾಡುತ್ತಿವೆ ಎಂಬುದನ್ನು ನೋಡಿ, 35 ನಿರ್ದೇಶಕರು ಇದ್ದೀರಿ, ನಿಸ್ವಾರ್ಥವಾಗಿ ಕೆಲಸ ಮಾಡಿ. ನೀವು ಸರಿಯಾಗಿ ಕೆಲಸ ಮಾಡಿದ್ದಿದ್ದರೆ ಸಂಘ ನಂಬರ್ ವನ್ ಆಗುತ್ತಿತ್ತು. ಆದರೆ, ಇಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಮೊದಲು ಗುಂಪುಗಾರಿಕೆ ಬಿಡಿ, ಒಂದು ಕುಟುಂಬದ ರೀತಿಯಲ್ಲಿ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.

ಸಂಶೋಧನೆಗೆ ಹೆಚ್ಚು ಒತ್ತು ಕೊಡಿ

ಕಿಮ್ಸ್ ಆಸ್ಪತ್ರೆಯಲ್ಲಿ ಒಳ್ಳೆಯ ತಜ್ಞ ವೈದ್ಯರು ಇದ್ದೀರಿ. ವೈದ್ಯ ಸೇವೆಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ದಿ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಕಳೆದ ಬಾರಿ ನಾನು ಸಿಎಂ ಆಗಿದ್ದಾಗ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ಗೆ ಹೆಚ್ಚು ಒತ್ತು ನೀಡಿದ್ದೆ.

ಕಿದ್ವಾಯಿ ಆಸ್ಪತ್ರೆಗೆ ಅನುದಾನ ಕೊಟ್ಟು ಬಡವರಿಗೆ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದೆ. ಆದರೆ ಅಲ್ಲಿ ನಿತ್ಯವೂ ಸಣ್ಣಪುಟ್ಟ ಔಷಧಿಗಳನ್ನು ಹೊರಗೆ ಬರೆದುಕೊಡುತ್ತಿದ್ದಾರೆ ಎನ್ನುವ ಮಾಹಿತಿ ನನಗೆ ಬಂದಿದೆ. ಇದು ನನಗೆ ಬಹಳ ನೋವುಂಟು ಮಾಡಿದೆ. ಈ ಬಗ್ಗೆ ವೈದ್ಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರ ಗಮನಕ್ಕೂ ತಂದಿದ್ದೇನೆ ಎಂದು ಹೇಳಿದರು.

ಬೆಂಗಳೂರು ವೈದ್ಯ ಕಾಲೇಜು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ 20% ಹೆಚ್ಚು ಶುಲ್ಕ ವಿಧಿಸಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳ ಚಿಕಿತ್ಸೆ ದುಬಾರಿ ಆಗುತ್ತಿದೆ. ಇದು ನಿಜಕ್ಕೂ ನೋವಿನ ಸಂಗತಿ, ಬಡ ಜನರಿಗೆ ಚಿಕಿತ್ಸೆ ಪಡೆಯಲು ಎಲ್ಲಿ ಸಾಧ್ಯ ಆಗುತ್ತದೆ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅವರು, ಆದಿಚುಂಚನಗಿರಿ ಮಹಾಸಂಸ್ಥಾನದ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದರು. ಒಕ್ಕಲಿಗರ ಸಂಘದ ಅಧ್ಯಕ್ಷ ಸಿ ಎನ್ ಬಾಲಕೃಷ್ಣ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!