Doddaballapura: ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರಿಗೆ ಅಭಿನಂದನೆ

ದೊಡ್ಡಬಳ್ಳಾಪುರ: ಸಾಹಿತ್ಯ, ಸಂಗೀತ ಮುಂತಾದ ಲಲಿತಕಲೆಗಳಿಂದ ಮುನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ ಎಂದು Doddaballapura ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು
      
ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್  ಮತ್ತು ಗೈಡ್ ಸಹಯೋಗದಲ್ಲಿ ಜಾನಪದ ಗೀತಾ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರುಗಳಾದ ಎಂ.ಕವಿತಾ, ಟಿ.ಸಿ.ಹರ್ಷಿತಾ, ಕೆ.ಯು.ಹರ್ಷಿತಾ, ಬಿ.ಎಂ.ವರ್ಷಿಣಿ, ವಿ.ನಾಗವೇಣಿ, ಎನ್.ಕಾವ್ಯಶ್ರೀ ಅವರನ್ನು ಅಭಿನಂದಿಸಿ  ಮಾತನಾಡಿದರು.

ಪ್ರತಿ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು  ಪ್ರತಿಭೆ ಇದ್ದೆ ಇರುತ್ತದೆ. ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವ ಬಿಟ್ಟು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಧೈರ್ಯ ತೋರಬೇಕು. ಪ್ರತಿಭೆಯು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು ಮಾತನಾಡಿ, ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ‌ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಯ್ಕೆಯಾಗಿರುವ ಗೊ.ರು.ಚನ್ನಬಸಪ್ಪ ಅವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾಗಿ ಆಗಿ ಮಹತ್ವದ ಸೇವೆ ಸಲ್ಲಿಸಿದವರು.

ಗೊ.ರು.ಚನ್ನಬಸಪ್ಪ ಅವರು  ಭಾರತ್ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ಹಲವಾರು ನೃತ್ಯ ಗೀತೆಗಳನ್ನು ರಚಿಸಿದ್ದಾರೆ. ಜಾನಪದ ವಿದ್ವಾಂಸರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗಣನೀಯ ಸೇವೆಯನ್ನು   ಗೊ.ರು.ಚನ್ನಬಸಪ್ಪ ಸಲ್ಲಿಸಿದ್ದಾರೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ಮಾತನಾಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ. ಜಾನಪದ ಸಾಹಿತ್ಯದಲ್ಲಿ ಬದುಕಿನ ಅನುಭವ ಮತ್ತು ಮಾನವೀಯ ಮೌಲ್ಯಗಳನ್ನು ಕಾಣಬಹುದಾಗಿದೆ. ಜಾನಪದ ಎಂಬುದು ಸಾಂಸ್ಕೃತಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ‌ ದರ್ಜೆ ಕಾಲೇಜಿನ ಪ್ರಾಧ್ಯಾಪಕರುಗಳಾದ ಪ್ರೊ.ನಂಜಪ್ಪ, ಪ್ರೊ.ಸುಷ್ಮಾ, ಪ್ರೊ.ಭಾರತಿ, ಪ್ರೊ.ದಿವ್ಯಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಗುಂಡಸಂದ್ರ MPCS ಜೆಡಿಎಸ್ ತೆಕ್ಕೆಗೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಗುಂಡಸಂದ್ರ MPCS ಜೆಡಿಎಸ್ ತೆಕ್ಕೆಗೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗುಂಡಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಗಿದ್ದು, ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

[ccc_my_favorite_select_button post_id="120184"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!