BJPಯ ಭ್ರಮೆಗೆ ಮತದಾರರಿಂದ ತಕ್ಕ ಉತ್ತರ: ಎಂಬಿ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಫಲಿತಾಂಶ ಬಂದಿದೆ. ಮೂರೂ ಕಡೆ ಗೆದ್ದು, ಕಾಂಗ್ರೆಸ್ ಸರಕಾರವನ್ನು ಬೀಳಿಸುವ ಭ್ರಮೆಯಲ್ಲಿ ತೇಲಾಡುತ್ತಿದ್ದ ಬಿಜೆಪಿಗೆ (BJP) ಪ್ರಬುದ್ಧ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ದೇವೇಗೌಡರು ಕೂಡ ಸಿದ್ದರಾಮಯ್ಯನವರ ಸರಕಾರವನ್ನು ಬೀಳಿಸುವ ಮಾತುಗಳನ್ನಾಡಿದ್ದರು. ಆದರೆ ಚನ್ನಪಟ್ಟಣದ ಜನ ಅವರ ಮೊಮ್ಮಗನ ವಿರುದ್ಧ ಜನಾದೇಶ ನೀಡಿದ್ದಾರೆ ಎಂದಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರಕಾರವನ್ನು ಯಾರೂ ಕಿತ್ತೊಗೆಯಲಾರರು. ಆ ಶಕ್ತಿ ಇರುವುದು ಜನರಿಗೆ ಮಾತ್ರ. ಈ ಫಲಿತಾಂಶ ಅದನ್ನು ಎತ್ತಿ ತೋರಿಸಿ, ಸ್ಪಷ್ಟ ಸಂದೇಶ ನೀಡಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.

ಶಿಗ್ಗಾಂವಿಯಲ್ಲಿ ಕೂಡ ಬಿಜೆಪಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರನನ್ನೇ ಬಿಜೆಪಿ ಕಣಕ್ಕೆ ಇಳಿಸಿತ್ತು. ಅಲ್ಲಿ ನಮ್ಮ ಪಕ್ಷದಿಂದ ಅಲ್ಪಸಂಖ್ಯಾತ ಸಮುದಾಯದವರು ಅಭ್ಯರ್ಥಿ ಆಗಿದ್ದರು. ಮತದಾರರು ಅವರ ಪರವಾಗಿ ಜನಾದೇಶ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನ ಸಮುದಾಯಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ ಎಂದು ಅವರು ವಿವರಿಸಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!