ದೊಡ್ಡಬಳ್ಳಾಪುರ: ತಾಲೂಕಿಗೆ ಹೊಂದಿಕೊಂಡಂತಿರುವ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಹೊಳೆ ನಂಜುಂಡೇಶ್ವರ ದೇವಾಲಯದಲ್ಲಿ ಕೊನೆಯ ಕಾರ್ತಿಕ ಸೋಮವಾರದ ( koneya karthika somavara in kannada) ಅಂಗವಾಗಿ ಇಂದು ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ.
ಮುಂಜಾನೆ 3 ಗಂಟೆಗೆ ಆರಂಭವಾಗಿರುವ ಪೂಜಾ ಕಾರ್ಯಕ್ರಮದ ಅಂಗವಾಗಿ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ದೇವರಿಗೆ 9 ವಿವಿಧ ಬಣ್ಣಗಳ ಹೂವಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ರಾಮನಗರ ಮತ್ತಿತರರ ಕಡೆಗಳಿಂದ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ದೇವಾಲಯಕ್ಕೆ ಬರುವ ಭಕ್ತರಿಗೆ ಪ್ರಸಾದ ವಿನಿಯೋಗ ಕೂಡ ನಡೆಸಲಾಗುತ್ತಿದೆ.