ಬೈಎಲೆಕ್ಷನ್ ಮುಖಭಂಗ: BJP ಕಾರ್ಯಕರ್ತರಿಗೆ ಪತ್ರ ಬರೆದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.. ಹೇಳಿದ್ ಏನು ನೋಡಿ

ಬೆಂಗಳೂರು: ವಾಲ್ಮೀಕಿ ಹಗರಣ, ಮೂಡ ಹಗರಣ, ವಕ್ಫ್ ವಿವಾದ ನಡುವೆಯೂ ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಭರ್ಜರಿ ಗೆಲುವನ್ನು ಸಾಧಿಸಿ ರಾಜ್ಯ ಬಿಜೆಪಿಗೆ (BJP) ತೀವ್ರ ಮುಖಭಂಗವನ್ನುಂಟು ಮಾಡಿದೆ.

ಕಮಲ-ದಳ ಮೈತ್ರಿಯಲ್ಲಿ ಕೇಂದ್ರ ಸಚಿವ, ಸಂಸದ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದರು ಸೋಲನ್ನು ಅನುಭವಿಸಿರುವುದು, ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಂಡಾಯ ನಾಯಕರ ವಾಗ್ದಾಳಿ ಮೈತ್ರಿ ಪಕ್ಷಕ್ಕೆ ತೀವ್ರ ಹಿನ್ನಡೆಯನ್ನುಂಟುಮಾಡಿದೆ.

ಚುನಾವಣೆ ಫಲಿತಾಂಶದ ಬಳಿಕ ಇಂದು ಕಾರ್ಯಕರ್ತರಿಗೆ ಪತ್ರ ಬರೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಧೈರ್ಯ ಬದ್ಧತೆ – ಅಚಲತೆ, ಸಫಲತೆಯ ಪ್ರತೀಕ ಗುರಿಯಿಟ್ಟು – ಛಲ ಹೊತ್ತು, ಧೈಯ ಮಾರ್ಗದಲ್ಲಿ ಸಾಗೋಣ ಎಂದು ಕರೆ ನೀಡಿದ್ದಾರೆ.

ವಿಜಯೇಂದ್ರ ಪತ್ರ

ಸಹೃದಯ ಕಾರ್ಯಕರ್ತ ಬಂಧುಗಳೇ,

ಉಪಚುನಾವಣೆ ಫಲಿತಾಂಶಗಳು ಪಕ್ಷ ಸಂಘಟನೆಯ ಸಾಮರ್ಥ್ಯ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ.

ಸದ್ಯ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮಪಕ್ಷ ಎರಡು ಕ್ಷೇತ್ರಗಳಲ್ಲಿ, ಮಿತ್ರ ಪಕ್ಷ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಪರಾಜಯಗೊಂಡಿರುವ ಕಾರಣದಿಂದ ನಾವ್ಯಾರೂ ಎದೆಗುಂದಬೇಕಿಲ್ಲ. ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್‌ನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸ್ಸಂಶಯ, ಆದರೂ ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ, ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತವೂ ಆಗಿದೆ ಎಂದು ಭಾವಿಸೋಣ.

ಭಾರತೀಯ ಜನತಾ ಪಾರ್ಟಿ ಅಧಿಕಾರದ ಬೆನ್ನು ಹತ್ತಿ ರಾಜಕಾರಣ ಮಾಡುವುದಕ್ಕಾಗಿ ಜನ್ಮತಾಳಿದ್ದಲ್ಲ. ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ, ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಳವಣಿಗೆಯ ಪ್ರತಿ ಹಂತವೂ ಚಾರಿತ್ರಿಕ ದಾಖಲೆಗಳಾಗಿವೆ.

ಪಕ್ಷದ ಕಾರ್ಯಕರ್ತರಾಗಿ ನಾವೆಲ್ಲರೂ ಹೆಮ್ಮೆ ಪಡುವ ನಿಟ್ಟಿನಲ್ಲಿ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಹೆಬ್ಬಾಗಿಲು ತೆರೆದು ಕೊಟ್ಟ ರಾಜ್ಯ ‘ಕರ್ನಾಟಕ’ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಕಳೆದ ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಅಭಿವೃದ್ಧಿ ಶೂನ್ಯ ಆಡಳಿತದೊಂದಿಗೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿಕೊಂಡು ರಾಜ್ಯದ ಗೌರವ ಹಾಗೂ ಘನತೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಕುಗ್ಗುವಂತಾಗಲು ಕಾರಣವಾಗಿದೆ.

ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಬ್ಯಾಂಕಿನ ಖಾತೆಗೆ ಖನ್ನ ಹಾಕಿ ಲಪಟಾಯಿಸಿದ ಪ್ರಕರಣವೂ ದೇಶದ ಇತಿಹಾಸದಲ್ಲಿಯೇ ಮೊದಲು. ವಕ್ಸ್ ಕಾಯ್ದೆ ಹೆಸರಿನಲ್ಲಿ ರೈತರು, ಮಠಮಾನ್ಯಗಳು ಹಾಗೂ ದೇವಸ್ಥಾನಗಳ ಆಸ್ತಿ ಆಕ್ರಮಿಸಲು ಕಠೋರ ನಿಲುವಿನ ಅಸ್ತ್ರ ಬಳಸಿದ್ದು ಇದೇ ಮೊದಲು. ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿ ಕಡು ಬಡವರ ಅನ್ನದ ತಟ್ಟೆಯನ್ನು ನಿರ್ದಯವಾಗಿ ಈ ಸರ್ಕಾರ ಕಿತ್ತುಕೊಳ್ಳಲು ಹೊರಟಿದ್ದೇಕೆ ?

ತಾವು ತಪ್ಪೇ ಮಾಡದಿದ್ದರೆ,ಅಕ್ರಮವಾಗಿ ನಿವೇಶನಗಳನ್ನು ಪಡೆಯದಿದ್ದರೆ 14 ನಿವೇಶನಗಳನ್ನು ಮುಡಾಗೆ ಒಪ್ಪಿಸಿದ್ದಾದರೂ ಏಕೆ? ಎಂಬ ಪ್ರಶ್ನೆಗಳು ಇಂದಿಗೂ ಜೀವಂತ. ಕಾನೂನು ವ್ಯವಸ್ಥೆಯಲ್ಲಿ ಇದು ತಾರ್ಕಿಕ ಅಂತ್ಯ ಕಾಣುವವರೆಗೂ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಕೆಲವು ಮಂತ್ರಿಗಳು ಪ್ರಾಮಾಣಿಕತೆಯ ಮಾತನಾಡುವ ನೈತಿಕತೆ ಹೊಂದಲು ಸಾಧ್ಯವೇ ಇಲ್ಲ.

ಹಣ ಬಲ, ಅಧಿಕಾರ ಬಲದ ಜೊತೆಗೆ ಚುನಾವಣೆಯ ಹಿಂದಿನ ದಿನವನ್ನು ಗುರಿಯನ್ನಾಗಿಸಿಕೊಂಡು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತದಾರರ ಖಾತೆಗೆ ಹಾಕಿದ್ದು ಚುನಾವಣೆಯ ಅನೈತಿಕತೆಯಲ್ಲದೇ ಮತ್ತಿನ್ನೇನು? ದುರ್ಮಾರ್ಗಗಳನ್ನು ಬಳಸಿ ಉಪಚುನಾವಣೆಯನ್ನು ಗೆಲ್ಲುವುದು ಆಡಳಿತ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ಸಿಗೆ ಹೊಸತೇನೂ ಅಲ್ಲ, ಈ ನಿಟ್ಟಿನಲ್ಲಿ ಈ ಚುನಾವಣೆಯ ಅಪಜಯವನ್ನು ನಾವ್ಯಾರೂ ಹಿನ್ನೆಡೆ ಎಂದು ಪರಿಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.

ಇದೇ ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಗೆದ್ದ ನಂತರ ಸಾರ್ವತ್ರಿಕ ಚುನಾವಣೆಯಲ್ಲಿ ಏಕೆ ಧೂಳಿಪಟವಾಯಿತು ಎಂಬ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಬೇಕಾಗಿದೆ ತಮ್ಮಭ್ರಷ್ಟತೆಯ ಕರಾಳ ಮುಖ ಒರೆಸಿಕೊಳ್ಳಲು ಈ ಫಲಿತಾಂಶ ಯಾವುದೇ ಕಾರಣಕ್ಕೂ ವಸ್ತವೂ ಆಗುವುದಿಲ್ಲ, ಅಸ್ತವೂ ಆಗುವುದಿಲ್ಲ.

ಈ ಸರ್ಕಾರದ ಉಳಿದಿರುವ ಅವಧಿಯನ್ನು ಗಮನಿಸಿಯೂ ಜನರು ಕೆಲವು ನಿರೀಕ್ಷೆಗಳೊಂದಿಗೆ ಈ ಉಪ ಚುನಾವಣೆಯಲ್ಲಿ ಮತ ನೀಡಿರುವ ಸಾಧ್ಯತೆಯನ್ನೂ ನಾವು ಅಲ್ಲಗಳೆಯಲಾಗದು. ಈ ನಿಟ್ಟಿನಲ್ಲಿ ಕಾಂಗ್ರೆಸ್ಸಿಗರು ಉಪ ಚುನಾವಣೆಯ ಗೆಲುವಿಗಾಗಿ ತಮ್ಮ ಬೆನ್ನು ತಟ್ಟಿಕೊಂಡು ಸಂಭ್ರಮಿಸಬೇಕಾಗಿಲ್ಲ, ಅವರ ಮುಂದೆ ದೊಡ್ಡ ಜವಾಬ್ದಾರಿಯಿದೆ, ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಹಾದಿಯಲ್ಲಿ ಒಂದೇ ಒಂದು ಹೆಜ್ಜೆಯನ್ನೂ ಇಟ್ಟಿಲ್ಲ.

ತಮ್ಮಗ್ಯಾರಂಟಿ ಯೋಜನೆಯನ್ನೂ ಸಮರ್ಪಕವಾಗಿ ನಿರ್ವಹಿಸಲಾಗದ ಸ್ಥಿತಿಯನ್ನು ಸರಿದೂಗಿಸಿಕೊಳ್ಳಲು ಇತರ ಅಭಿವೃದ್ಧಿ ಕಾರ್ಯಗಳಿಗೆ ಕಲ್ಲು ಹಾಕಿದ್ದಾರೆ. ಹತ್ತು ಹಲವು ಇಲಾಖೆಗಳು ಕೆಲಸವಿಲ್ಲದೇ ನಿಂತಲ್ಲೇ ನಿಂತಿವೆ. ಯುವಕರಿಗಾಗಿ ಉದ್ಯೋಗ ಸೃಷ್ಟಿಯಾಗಿಲ್ಲ, ರೈತರಿಗಾಗಿ ಯಾವುದೇ ಹೊಸ ನೀರಾವರಿ ಯೋಜನೆ ಆರಂಭವಾಗಲಿಲ್ಲ, ಮಹಿಳಾ ಉದ್ಯೋಗಕ್ಕಾಗಿ ಕಾರ್ಯಕ್ರಮ ರೂಪಿಸಲಿಲ್ಲ, ಶಿಕ್ಷಣ ಸುಧಾರಣೆಗಾಗಿ ಕನಿಷ್ಟ ಕಾರ್ಯಕ್ರಮವನ್ನೂ ರೂಪಿಸಲಿಲ್ಲ.

ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣವನ್ನು ಹಾಗೂ ಹಿಂದುಳಿದವರು, ಅತೀ ಹಿಂದುಳಿದವರು, ಆದಿವಾಸಿಗಳು ಹಾಗೂ ಅಲೆಮಾರಿ ಸಮುದಾಯಗಳ ವಿವಿಧ ಅಭಿವೃದ್ಧಿ ನಿಗಮಗಳ ಚಟುವಟಿಕೆಗಳಿಗೆ ಕನಿಷ್ಟ ಅನುದಾನವನ್ನೂ ನೀಡಲಿಲ್ಲ.

ಇಷ್ಟಾಗಿಯೂ ಮೂರು ಉಪಚುನಾವಣೆಯ ಫಲಿತಾಂಶ ತಮ್ಮಸಾಧನೆ ಎಂದು ಬೀಗುತ್ತಿರುವ ಕಾಂಗ್ರೆಸ್ಸಿಗರು ಯಾವ ನೈತಿಕತೆಯಿಂದ ಈ ಜಯವನ್ನು ಸಂಭ್ರಮಿಸುತ್ತಾರೆಂದು ಈ ರಾಜ್ಯದ ಜನತೆಗೆ ತಿಳಿಸಬೇಕಿದೆ. ನಮ್ಮಭಾರತೀಯ ಜನತಾ ಪಾರ್ಟಿಯಲ್ಲಿ ಅಭಿಪ್ರಾಯ ಭೇದಗಳಿಗೆ ಮುಕ್ತ ಅವಕಾಶ ಇದ್ದೇ ಇದೆ, ಅದೇ ರೀತಿಯಲ್ಲಿ ಶಿಸ್ತು, ಸಂಯಮಗಳು ಎಲ್ಲೆ ಮೀರದಂತೆ ನೋಡಿಕೊಳ್ಳುವ ವ್ಯವಸ್ಥೆಯೂ ನಮ್ಮಲ್ಲಿದೆ.

ಈ ಕ್ಷಣಕೂ ಪ್ರತಿಯೊಬ್ಬ ಕಾರ್ಯಕರ್ತರು, ಪ್ರಮುಖರು ಹಾಗೂ ಹಿರಿಯರೊಂದಿಗೆ ವಿಶ್ವಾಸ, ಪ್ರೀತಿಯನ್ನು ಬೆಳೆಸುಳಿಸಿಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎನ್ನುವ ಹಂಬಲ ಹಾಗೂ ಸಂಕಲ್ಪ ನನ್ನದಾಗಿದೆ. ಕಾರ್ಯಕರ್ತರಲ್ಲಿ ವಿನಮ್ರ ವಿನಂತಿ ಏನೆಂದರೆ ರಾಜ್ಯದ ಉಪಚುನಾವಣೆಯ ಫಲಿತಾಂಶದ ಪರಿಣಾಮ ನಮ್ಮ ಸಂಘಟನೆಯ ಮೇಲೆ ಯಾವ ಪ್ರಭಾವವನ್ನೂ ಬೀರಲು ಸಾಧ್ಯವಿಲ್ಲ.

ಇದನ್ನು ಸಂಪೂರ್ಣವಾಗಿ ಉಪೇಕ್ಷಿಸೋಣ. ಪಕ್ಕದ ಮಹಾರಾಷ್ಟ್ರದ ಐತಿಹಾಸಿಕ ಮಹಾ ವಿಜಯವನ್ನು ನಾವು ಪ್ರೇರಣೆಯಾಗಿ ಸ್ವೀಕರಿಸಿ, ಭವಿಷ್ಯದ ದಿನಗಳಲ್ಲಿ ಒಂದು ದಿನವೂ ವ್ಯಯ ಮಾಡದೇ ರಾಜ್ಯದಲ್ಲಿ ಮತ್ತೆ ಭಾರತೀಯ ಜನತಾ ಪಾರ್ಟಿಯ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಕಲ್ಪ ತೊಡೋಣ. ಮುಂದೆಯೂ ಮಿತ್ರ ಪಕ್ಷ ಜೆಡಿಎಸ್ ಜತೆಗೆ ಸಹಕಾರದ ಹೆಜ್ಜೆಗಳನ್ನು ಇಡೋಣ.

ನಮ್ಮಗುರಿ ಏನಿದ್ದರೂ ಸಂಘಟನೆ ಜತೆಗೆ ಕಾಂಗ್ರೆಸ್ ಸರ್ಕಾರದ ಬಹುಸಂಖ್ಯಾತ ಜನರ ವಿರೋಧಿ ಧೋರಣೆ ಹಾಗೂ ಭ್ರಷ್ಟ ಆಡಳಿತವನ್ನು ಕೊನೆಗಾಣಿಸುವುದಕ್ಕಾಗಿ ಎಂಬ ಶಪಥ ಮಾಡೋಣ. ಆ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತವನ್ನು ‘ನಂಬರ್ -1 ಸ್ಥಾನದಲ್ಲಿ ಕಾಣುವ ಮಹಾಸಂಕಲ್ಪ ತೊಟ್ಟಿರುವ ಪ್ರಧಾನಿ ಮೋದಿ ಅವರ ಹಾದಿಯಲ್ಲಿ ಸದೃಢ ಮನಸ್ಸಿನಿಂದ ಸಾಗೋಣ.

ಭಾರತೀಯ ಜನತಾ ಪಾರ್ಟಿಯ ಸುಭದ್ರ ಕೋಟೆಯ ನಡುವೆ ಬಿರುಕು ಮೂಡಿಸಲು ಯತ್ನಿಸುವ ಶಕ್ತಿಗಳನ್ನು ಮೆಟ್ಟಿನಿಂತು ನಮ್ಮೆಲ್ಲರ ‘ಒಗ್ಗಟ್ಟಿನ ಮುಷ್ಠಿ ದೇಶ ಕಟ್ಟುವ ಶಕ್ತಿಯಾಗಲೆಂದು ನಿಮ್ಮೆಲ್ಲರಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಭಿನ್ನವಿಸಿಕೊಳ್ಳುತ್ತೇನೆ.

ಈ ನಿಟ್ಟಿನಲ್ಲಿ ಹಿರಿಯರ ಆಶೀರ್ವಾದ, ಪ್ರಮುಖರ ಮಾರ್ಗದರ್ಶನ ಪಡೆದು ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ಸಂಘಟನೆಯನ್ನು ಬಲವೃದ್ಧಿಗೊಳಿಸೋಣ. ಬದ್ಧತೆ – ಅಚಲತೆ, ಸಫಲತೆಯ ಪ್ರತೀಕ ಗುರಿಯಿಟ್ಟು – ಛಲ ಹೊತ್ತು, ಧೈಯ ಮಾರ್ಗದಲ್ಲಿ ಸಾಗೋಣ ಎಂದಿದ್ದಾರೆ.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!