ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಫೆಂಗಲ್ ಚಂಡಮಾರುತ (FengalCyclone) ಸೃಷ್ಟಿಯಾಗಿದ್ದು, ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
4 ದಿನಗಳ ಕಾಲ ಭಾರಿ ಮಳೆ ಯಾಗುವ ನಿರೀಕ್ಷೆ ಇದ್ದು, ತಮಿಳುನಾಡಿನ ಕರಾವಳಿ ಪ್ರದೇಶಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಚಂಡಮಾರುತ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರದ ಮೇಲೂ ಪ್ರಭಾವ ಬೀರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತ ಅಪ್ಪಳಿಸಲಿ ರುವ ಹಿನ್ನೆಲೆ ತಮಿಳುನಾಡಿನ ನಾಗಪಟ್ಟಣಂ, ತಿರುವರೂರ್ ಮತ್ತು ಮೈಲಾ ಡುತುರೈ ಮತ್ತು ಕಾರೈಕಲ್ ಪ್ರದೇಶಗಳಿಗೆ ರೆಡ್ ಅಲರ್ಟ್, ಕೆಲವು ಪ್ರದೇಶಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಮುಂದಿನ 4-5 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ಬಂಗಾಳ ಕೊಲ್ಲಿಯಲ್ಲಿ ಸುತ್ತು ಹಾಕು ತ್ತಿರುವ ಫೆಂಗಲ್ ಚಂಡಮಾರುತ ಬುಧವಾರ ತೀವ್ರಗೊಳ್ಳಲಿದ್ದು, ನಂತರ ಉತ್ತರ- ವಾಯುವ್ಯ ದಿಕ್ಕಿನತ್ತ ಸಾಗಿ ತಮಿಳುನಾಡು ಕರಾವಳಿಯತ್ತ ಚಲಿಸಲಿದೆ. ಪರಿಣಾಮ 2 ದಿನ ಶ್ರೀಲಂಕಾ ಕರಾವಳಿ ಯಲ್ಲೂ ಮಳೆಯಾಗಲಿದೆ. ಬುಧವಾರ ತಮಿಳುನಾಡು ಮತ್ತು ಪುದುಚೇರಿಯ ಹಲ ವೆಡೆ ಭಾರೀ ಮಳೆಯಾಗಲಿದೆ. ಆಂಧ್ರ ಪ್ರದೇಶದಲ್ಲೂ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮೈಲಾಡುತುರೈ, ಕಡಲೂರು, ಕಾರೈಕಲ್ ಪ್ರದೇಶದಲ್ಲಿ ಬುಧವಾರಕ್ಕೆರೆಡ್ ಅಲರ್ಟ್ ಘೋಷಿಸಲಾಗಿದೆ. ಚೆಂಗಲ್ಪಟ್ಟು, ವಿಲ್ಲುಪುರಂ, ಅರಿಯಲೂರು, ತಂಜಾವೂರು, ತಿರುವರೂರು, ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಬುಧವಾರ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಫೆಂಗಲ್ ಚಂಡಮಾರುತ ಬೆಂಗಳೂರಿನ ಮೇಲೂ ಪರಿಣಾಮ ಬೀರಲಿದ್ದು, 3 ದಿನ ಮಳೆಯಾಗುವ ಸಾಧ್ಯತೆ ಇದೆ.