
ದೊಡ್ಡಬಳ್ಳಾಪುರ (Doddaballapura): ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದಲ್ಲಿ ಕಾರ್ತೀಕ ಮಾಸದ ದೀಪೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಮಂಗಳವಾರ ರಾತ್ರಿ ಸಂಭ್ರಮದಿಂದ ನೆರೆವೇರಿತು.
ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ 14 ನೇ ವರ್ಷದ ಕಾರ್ತೀಕ ಮಾಸದ ದೀಪೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಶ್ರೀ ವೀರಭದ್ರಸ್ವಾಮಿ ಮತ್ತು ಶ್ರೀ ಪ್ರಸನ್ನ ಭದ್ರಕಾಳಮ್ಮ ದೇವಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು.
ದೀಪೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಕ್ತಾಧಿಗಳು ಭಾಗವಹಿಸಿ ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿ, ದೀಪ ಬೆಳೆಗಿದರು.
