ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಿಂತನೆ: ಸಚಿವ ಎಸ್.ಮಧುಬಂಗಾರಪ್ಪ| Chandragutti

ಶಿವಮೊಗ್ಗ: ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ (Chandragutti) ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, 12ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುದೇವರ ಜನ್ಮಸ್ಥಳ ಬಳ್ಳಿಗಾವೆ ಹಾಗೂ ಶಿವಮೊಗ್ಗ ನಗರದಲ್ಲಿ ನೂತನವಾಗಿ ಹೆಸರಿಸಲಾದ ಅಲ್ಲಮಪ್ರಭು(ಪ್ರೀಡಂ ಪಾರ್ಕ್) ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಸಮಾಲೋಚನೆ ನಡೆಸಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡಗಳನ್ನು ಒಂದೇ ಕಟ್ಟಡ ಸಂಕೀರ್ಣದಲ್ಲಿ ನಿರ್ಮಿಸಲು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಹಿಂದಿನ ನಿವೇಶನವನ್ನು ಕಾಯ್ದಿರಿಸಲಾಗಿದ್ದು, ಜಿಲ್ಲೆಯ ಜನರಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ ಅತ್ಯಾಧುನಿಕ ಹಾಗೂ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಲು ಮುಂದಿನ ಬಜೆಟ್‌ನಲ್ಲಿ ಅಗತ್ಯ ಅನುದಾನ ಕಾಯ್ದಿರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಕೋರಲಾಗುವುದು.

ಈಗಾಗಲೇ ಈ ಸಂಬಂಧ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದು, ಮುಖ್ಯಮಂತ್ರಿಗಳು ಉತ್ಸುಕರಾಗಿರುವುದಾಗಿ ತಿಳಿಸಿದ ಅವರು, ನಿರ್ಮಿಸುವ ಕಟ್ಟಡದ ವಿನ್ಯಾಸವು ಮಾದರಿ ಹಾಗೂ ಅತ್ಯಾಧುನಿಕವಾಗಿರುವಂತೆ ನೋಡಿಕೊಳ್ಳುವಂತೆ ಅವರು ಸಲಹೆ ನೀಡಿದರು.

ನಗರ ಅಲ್ಲಮಪ್ರಭು ಮೈದಾನದ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯು ಸುಮಾರು 5ಕೋಟಿ ರೂ.ಗಳನ್ನು ಕಾಯ್ದಿರಿಸಿದೆ. ಈ ಅನುದಾನಕ್ಕೆ ಸಹಕಾರಿಯಾಗುವಂತೆ ಸರ್ಕಾರದಿಂದ ಇನ್ನಷ್ಟು ಅನುದಾನವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗುವುದು. ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸುವಂತೆ ಅವರು ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.

ನಗರದ ಹೊರವಲಯದಲ್ಲಿ ಆರಂಭಗೊಂಡಿರುವ ಷಾಹಿ ಗಾರ್ಮೆಂಟ್ಸ್ಗೆ ಭೂಮಿ ಮಂಜೂರಾತಿಯಲ್ಲಿ ನಿಯಮ ಪಾಲನೆಯಾಗದಿರುವುದು ಕಂಡುಬಂದಿದೆ. ಅಲ್ಲದೇ ಸದರಿ ಕೈಗಾರಿಕೆಯಿಂದಾಗಿ ಭಾರೀ ಪ್ರಮಾಣದ ಪರಿಸರ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿಬರುತ್ತಿವೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೂಡಲೇ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ನಗರದಲ್ಲಿ ಫುಡ್‌ಪಾರ್ಕ್ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ದೊರೆತಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದ ಸಚಿವರು, 660ಕೋಟಿ ರೂ.ಗಳ ವೆಚ್ಚದಲ್ಲಿ ಶರಾವತಿಯಿಂದ ಸೊರಬ, ಆನವಟ್ಟಿ ಮತ್ತು ಶಿರಾಳಕೊಪ್ಪ ಪಟ್ಟಣ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಾಮಗಾರಿಗೆ ಶೀಘ್ರ ಚಾಲನೆ ದೊರೆಯಲಿದೆ.

ಅಂತೆಯೇ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯದಿಂದ ಶಿಕಾರಿಪುರ ಪಟ್ಟಣದ ನಿವಾಸಿಗಳಿಗೆ ವರ್ಷಪೂರ್ತಿ ಶುದ್ಧಕುಡಿಯುವ ನೀರು ಒದಗಿಸುವುದಲ್ಲದೇ ಕೃಷಿ ಚಟುವಟಿಕೆಗಳಿಗೂ ನೀರು ಒದಗಿಸಲು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಅವರು ಸೂಚಿಸಿದರು.
ಚಂದ್ರಗುತ್ತಿ ಧರ್ಮಕ್ಷೇತ್ರದ ದೇವಾಲಯದ ಸರ್ವಾಂಗೀಣ ವಿಕಾಸ ಹಾಗೂ ಪ್ರವಾಸಿತಾಣವನ್ನಾಗಿ ಪರಿವರ್ತಿಸಲು ಉದ್ದೇಶಿಸಿದ್ದು, ಅರಣ್ಯ ಇಲಾಖೆಯ ಅನುಮೋದನೆಗಾಗಿ ಕಡತ ಮಂಡಿಸಲಾಗಿದೆ.

ಈ ಸಂಬಂಧ ಅರಣ್ಯ ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಮುಂದಿನ ಜನವರಿ ಮೊದಲ ಮಾಸಾಂತ್ಯದೊಳಗಾಗಿ ವಿಮಾನದ ನೈಟ್ ಲ್ಯಾಂಡಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಇದರಿಂದಾಗಿ ವಿಮಾನ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲು ಸೂಚಿಸಲಾಗಿದೆ. ಮುಂದಿನ ತಿಂಗಳಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯ ಹೊಸನಗರದಲ್ಲಿ ನಡೆಸಲು ಈಗಾಗಲೇ ನಿರ್ಣಯಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ (Teachers' Constituency) ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ (Voter list) ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

[ccc_my_favorite_select_button post_id="115466"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!