ರಾಮನಗರ: 23ನೇ ತಾರೀಖಿನ ಫಲಿತಾಂಶ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಆದರೂ ಕ್ಷೇತ್ರದ ಜನ 87 ಸಾವಿರಕ್ಕೂ ಹೆಚ್ಚು ಮತ ನೀಡಿದ್ದಾರೆ. ಕ್ಷೇತ್ರದ ಮುಖಂಡರು, ಕಾರ್ಯಕರ್ತರಿಗೆ ಧೈರ್ಯ ತುಂಬುತ್ತೇವೆ. ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil kumaraswamy) ತಿಳಿಸಿದರು.
ಚನ್ನಪಟ್ಟಣ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯ ಸೋಲಿನ ಹೊಣೆ ಹೊತ್ತು ತಾಲೂಕು ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಜಯಮುತ್ತು. ವೇದಿಕೆಯಲ್ಲಿ ರಾಜೀನಾಮೆ ವಾಪಸ್ ಪಡೆಯುವಂತೆ ನಿಖಿಲ್ ಕುಮಾರಸ್ವಾಮಿ ಅವರು ಸಲಹೆ ನೀಡಿದರು. ಉದ್ವೇಗಕ್ಕೆ ಒಳಗಾಗಿ ಫಲಿತಾಂಶದ ನೈತಿಕ ಹೊಣೆ ಹೊರ್ತೀನಿ ಅಂದಿದ್ದಾರೆ. ಆದರೆ ಇದು ಎಲ್ಲರೂ ಸಾಮೂಹಿಕವಾಗಿ ನೈತಿಕ ಹೊಣೆ ಹೊರಬೇಕು ಎಂದು ತಿಳಿಸಿದರು.
ನನ್ನ ಮೇಲೆ ಅನುಮಾನ ಪಡಬೇಡಿ
ಇಡೀ ರಾಜ್ಯ ಸರ್ಕಾರವನ್ನೇ ಎದುರಿಸಿದ್ದೀರಿ. ನಿಮ್ಮ ಪಾದಗಳಿಗೆ ನಮಸ್ಕರಿಸಿ ಕೇಳ್ತೇನೆ ನನ್ನ ಮೇಲೆ ಅನುಮಾನ ಪಡಬೇಡಿ. ಅನಿರೀಕ್ಷಿತವಾಗಿ ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿದ್ದೇನೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೆ.
ಇತ್ತೀಚಿಗೆ ವಿಧಾನ ಚುನಾವಣೆಯಲ್ಲೂ ಕೆಲವು ಕಾರಣಗಳಿಂದ ಸೋತಿದ್ದೇನೆ.ಬಳಿಕ ಪಕ್ಷದ ಸಂಘಟನೆ ಜವಾಬ್ದಾರಿ ಹೊತ್ತು ರಾಜ್ಯ ಪ್ರವಾಸ ಮಾಡ್ತಿದ್ದೇನೆ. ಆದರೆ ಅನಿರೀಕ್ಷಿತವಾಗಿ ಈ ಚುನಾವಣೆಯಲ್ಲಿ ಸ್ಪರ್ಧೆ ಅನಿವಾರ್ಯ ಆಯ್ತು ಎಂದರು.
ಕುಮಾರಣ್ಣ ಅವರಿಗೆ ಮೂರು ಬಾರಿ ಆಪರೇಷನ್ ಆದ್ರೂ ಪಕ್ಷ ಉಳಿಸಲು ಹೋರಾಟ ಮಾಡ್ತಿದ್ದಾರೆ. ಏಕಾಂಗಿ ಹೋರಾಟಕ್ಕೆ ಬೆಂಬಲ ನೀಡಿದ್ದು ಇದೇ ಚನ್ನಪಟ್ಟಣ ತಾಲೂಕು. ಕುಮಾರಣ್ಣ ರಾಮನಗರ, ಚನ್ನಪಟ್ಟಣ ಎರಡೂ ಕಡೆ ಸ್ಪರ್ಧೆ ಮಾಡಿದ್ರು. ಎರಡೂ ಕಡೆ ಗೆದ್ದು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣ ಉಳಿಸಿಕೊಂಡಿದ್ರು.
ಎರಡು ಬಾರಿ ಕುಮಾರಣ್ಣನ ಅನುಪಸ್ಥಿತಿಯಲ್ಲಿ ಚುನಾವಣೆ ಮಾಡಿ ಗೆಲ್ಲಿಸಿದ್ದೀರಿ.ಇಂದು ಕೂಡಾ ಹಳ್ಳಿಹಳ್ಳಿಗಳಿಂದ ಬಂದು ಬೆಂಬಲ ಕೊಡ್ತಿದ್ದೀರಿ ನಿಮ್ಮ ಸಹಕಾರ ಆಶೀರ್ವಾದ ಇರಲಿ ಎಂದು ಮನವಿ ಮಾಡಿದರು.
ನಾನು ಮನೆಯಲ್ಲಿ ಕೂರುವವನಲ್ಲ
2004ರಲ್ಲಿ ಜೆಡಿಎಸ್ 54 ಸೀಟ್ ಪಡೆದಿತ್ತು. ಮುಂದಿನ ಚುನಾವಣೆಗೆ ಅದೇ ರೀತಿಯ ಹೋರಾಟ ಮಾಡಬೇಕು. ಕಾರ್ಯಕರ್ತರು, ಮುಖಂಡರು ನಮಗೆ ಬಲ ತುಂಬಬೇಕು. ಸೋತ ಮಾತ್ರಕ್ಕೆ ನಾನು ಮನೆಯಲ್ಲಿ ಕೂರುವವನಲ್ಲ. ಮೂರು ಬಾರಿ ಸೋತ್ರೂ ಎದೆಗುಂದುವುದಿಲ್ಲ. ಯಾವುದೇ ಮುಖಂಡರು, ಕಾರ್ಯಕರ್ತರು ಕಣ್ಣಲ್ಲಿ ನೀರು ಹಾಕಬೇಡಿ. ನಾವು ಸತ್ತಿಲ್ಲ, ಸೋತಿದ್ದೀವಿ ಅಷ್ಟೇ. ನನಗಿನ್ನು 35 ವರ್ಷ ವಯಸ್ಸು. ರಾಜ್ಯದ ಜನತೆಯ ಆಶೀರ್ವಾದ ನಮ್ಮ ಜತೆ ಇದೆ ಎಂದು ತಿಳಿಸಿದರು.
ಕೊಟ್ಟ ಮಾತು ವಾಪಸ್ಸ್ ಪಡೆಯಲ್ಲ
ಸರ್ಕಾರದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ. ನಮ್ಮ ತಂದೆಯವರಿಗೆ ಎಂಟು ಬಾರಿ ಅವಕಾಶ ಕೊಟ್ಟಿದ್ದೀರಿ.ನಾನು ಸೋತಿದ್ದೇನೆ ಅಂದಾಕ್ಷಣ ಕೊಟ್ಟ ಮಾತು ವಾಪಸ್ಸ್ ಪಡೆಯಲ್ಲ. ಕುಮಾರಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರಿಗೆ ಸಿಕ್ಕಿರೋ ಅವಕಾಶದಲ್ಲಿ ಕೆಲಸ ಮಾಡ್ತಾರೆ.ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಕೆಲಸ ಮಾಡ್ತೇವೆ ಎಂದರು.
ದಯಮಾಡಿ ನನ್ನ ಮೇಲೆ ಯಾರೂ ಅನುಮಾನ ಪಡೆಯಬೇಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ಈ ಪಕ್ಷವನ್ನ ದಡ ಮುಟ್ಟಿಸಬೇಕು. ನಾನು ಎಲ್ಲೂ ಹೋಗಲ್ಲ, ಇಲ್ಲೇ ಇರ್ತೀನಿ. 2018ರಲ್ಲಿ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿತ್ತು. ಆ ಕಾಲ ಮತ್ತೆ ಬರಲಿದೆ, ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಲ್ಲು ಕೆಲಸ ಮಾಡೋಣ ಎಂದರು.
ಜನಾಭಿಪ್ರಾಯಕ್ಕೆ ತಲೆಬಾಗಲೇಬೇಕು
ಕುಮಾರಣ್ಣ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ರು. ಆದರೆ ಜನಾಭಿಪ್ರಾಯಕ್ಕೆ ನಾವು ತಲೆಬಾಗಲೇಬೇಕು. ಯಾರ ಮೇಲೂ ದೂರುವ ಪ್ರಶ್ನೆ ಇಲ್ಲ. ಎಲ್ಲರೂ ಸಾಮೂಹಿಕ ಹೊಣೆ ಹೊತ್ತು ಮುಂದೆ ಜಿಲ್ಲೆಯ ನಾಲ್ಕು ಕ್ಷೇತ್ರ ಗೆಲ್ಲುವ ಗುರಿ ಇಟ್ಟು ಕೊಳ್ಳೊಣ. ಎಲ್ಲರ ಮುಖದಲ್ಲಿ ನಗು ಇರಲಿ, ಯಾರೂ ಬೇಸರ ಮಾಡಿಕೊಳ್ಳೊದು ಬೇಡ.ಕೃತಜ್ಞತಾ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.