ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಸರಿಯಲ್ಲ: ವಿಜಯೇಂದ್ರ ಆಕ್ರೋಶ| Vijayendra

ಬೆಂಗಳೂರು: ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (Vijayendra) ಅವರು ತಿಳಿಸಿದ್ದಾರೆ.

ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಸರಕಾರವು ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ ಎಂದು ಆಕ್ಷೇಪಿಸಿದರು.

ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ರಾಜ್ಯ ಸರಕಾರವು ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ; ಮಠಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಟೀಕಿಸಿದರು. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದು ವಿವರಿಸಿದರು.

ಯತ್ನಾಳ್ ವಿಚಾರ, ನಕಲಿ ನೋಟಿಸ್ ಎಂಬ ಹೇಳಿಕೆ ಕುರಿತು ಪದೇಪದೇ ಮಾತನಾಡುವುದಿಲ್ಲ. ನೋಟಿಸ್ ಅಸಲಿಯೇ ನಕಲಿಯೇ ಎಂಬುದು ಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ

ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅಲ್ಪಸಂಖ್ಯಾತ ಸಮುದಾಯದ ಕೆಲವು ಮುಖಂಡರು ದೊಡ್ಡ ಸಭೆ ಮಾಡಿ ನಾವು ಸುಪ್ರೀಂ ಕೋರ್ಟಿನ ಮುಂದೆ ಹೋಗಿ ಭಿಕ್ಷೆ ಬೇಡುವುದಿಲ್ಲ; ನಿಮಗೆ ಸಂಸತ್ ಇದ್ದರೆ ನಮಗೆ ರಸ್ತೆಗಳಿವೆ. ನಾವೂ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ ನಿದರ್ಶನವಿದೆ. ಇದಕ್ಕೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಕೇಳಿದರು.

ಕರಿಯ ಎಂದವರ ಬಗ್ಗೆ ಎಫ್‍ಐಆರ್ ಆಗಿದೆಯೇ? ಎಂದು ಕೇಳಿದರು. ವಕ್ಫ್ ವಿಚಾರದಲ್ಲಿ ರೈತರಿಗೆ ಆಗಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಅವತ್ತು ಒಂದು ಮಾತನ್ನಾಡಿದ್ದರು. ಅದಕ್ಕೆ ಅವರು ಪಶ್ಚಾತ್ತಾಪವನ್ನೂ ವ್ಯಕ್ತಪಡಿಸಿದ್ದಾರೆ. ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ ಮೇಲೆ ಇನ್ನೇನಿದೆ ಎಂದು ಪ್ರಶ್ನಿಸಿದರು.

ನಿಮ್ಮ ಪಕ್ಕದಲ್ಲೇ ನಿಂತು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ರಕ್ಷಿಸುತ್ತೀರಿ. ಮಾಡಿದ ತಪ್ಪಿಗೆ ಆಕ್ರೋಶ ವ್ಯಕ್ತವಾದಾಗ, ಕ್ಷಮೆ ಕೇಳಿದ ಮೇಲೂ ಕ್ರಮ ಜರುಗಿಸುವುದಾದರೆ ದ್ವಿಮುಖ ನೀತಿ ನಿಮ್ಮದಲ್ಲವೇ? ಓಲೈಕೆ ನೀತಿ ಮೂಲಕ ಹಿಂದೂಗಳು, ರೈತರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು.

ಬಿಜೆಪಿ ಸ್ವಾಮೀಜಿಗಳ ಪರ ನಿಲ್ಲಲಿದೆ. ಸರಕಾರದ ಅನ್ಯಾಯಗಳ ವಿಷಯವನ್ನು ಜನರಿಗೆ ಎತ್ತಿ ತೋರಿಸುವ ಕೆಲಸವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

ಬೇರೆ ಬೇರೆ ಕಾನೂನು ಇದೆಯೇ?

ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಅವರು ಮಾತನಾಡಿ, ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ. ದೇಶವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರಕಾರ ಯಾಕೆ ಕೇಸು ಹಾಕಿಲ್ಲ? ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ? ಕಾನೂನು ಬೇರೆ ಬೇರೆ ಇದೆಯೇ ಎಂದು ಪ್ರಶ್ನಿಸಿದರು.

ಸ್ವಾಮೀಜಿಯವರಿಗೆ 80 ವರ್ಷವಾಗಿದ್ದು, ಅನಾರೋಗ್ಯದಿಂದಿದ್ದಾರೆ. ಬಹಳ ನೊಂದಿದ್ದಾರೆ. ದೇಶದ್ರೋಹಿಗಳಿಗೂ ಇದು ಅನ್ವಯ ಮಾಡಬೇಕಿತ್ತು ಎಂದು ತಿಳಿಸಿದರು. ಎಲ್ಲರೂ ಒಗ್ಗೂಡಿ ಕೆಲಸ ಮಾಡಿ ಎಂದು ಸ್ವಾಮೀಜಿ ತಿಳಿಸಿದ್ದಾಗಿ ಹೇಳಿದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!