ವಕ್ಫ್‌ ವಿವಾದ: ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಕಾರಣ – ಆರ್‌.ಅಶೋಕ| RAshoka

ಮೈಸೂರು: ವಕ್ಫ್‌ ಮಂಡಳಿಯು ಬಡ ಜನರ ಭೂಮಿ ಕಬಳಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್‌ ಮಂಡಳಿಯಿಂದ ನೋಟಿಸ್‌ ನೀಡಲಾದ ಸ್ಥಳಗಳಿಗೆ ಭೇಟಿ ನೀಡಿದ ಆರ್‌.ಅಶೋಕ ಅವರು, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್‌ ಮಂಡಳಿ ಮೈಸೂರಿನಲ್ಲಿ ಅನೇಕರಿಗೆ ನೋಟಿಸ್‌ ನೀಡಿದೆ. ಭೂಮಿಯನ್ನು ಕಬಳಿಸುವುದರ ಜೊತೆಗೆ, ಈ ಜಾಗವನ್ನು ಲೀಸ್‌ಗೆ ಪಡೆಯಿರಿ ಎಂದು ವಕ್ಫ್‌ ಮಂಡಳಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಕೆಲವು ಕಡೆ ಬಡಜನರ ಭೂಮಿಗೆ ಬೇಲಿ ಹಾಕಿಕೊಂಡಿದ್ದಾರೆ. ಮುಸಲ್ಮಾನರೇ ಇಲ್ಲದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಮುನೇಶ್ವರ ನಗರವನ್ನು ಸಂಪೂರ್ಣ ವಕ್ಫ್‌ಗೆ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ರೀತಿ ಮಾಡುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗಲಿದೆ. ಇದಕ್ಕೆ ಸರ್ಕಾರವೇ ನೇರ ಕಾರಣವಾಗಲಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಹಿಂದೂಗಳಿಗೆ ಒಂದೇ ಮದುವೆಯಾಗುವಂತೆ ಕಾನೂನು ತರಲಾಯಿತು. ಆದರೆ ಮುಸ್ಲಿಮರಿಗೆ ಈ ಕಾನೂನು ಅನ್ವಯವಾಗಲಿಲ್ಲ. ಅಲ್ಲಿಂದಲೇ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರ ಪರವಾಗಿ ಕಾನೂನುಗಳನ್ನು ಜಾರಿ ಮಾಡಿತು. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ವಕ್ಫ್‌ ಮಂಡಳಿಗೆ ಸಂಪೂರ್ಣ ಅಧಿಕಾರ ನೀಡುವಂತೆ ಕಾನೂನು ತಿದ್ದುಪಡಿ ತಂದರು. ಅದಾದ ನಂತರ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಭೂಮಿ ಒಂದೇ ಬಾರಿಗೆ ವಕ್ಫ್‌ ಮಂಡಳಿಗೆ ಸೇರಿಬಿಟ್ಟಿತು. ಇವೆಲ್ಲವನ್ನೂ ವ್ಯವಸ್ಥಿತವಾಗಿದೆ ಮಾಡಲಾಗಿದೆ ಎಂದು ದೂರಿದರು.

ವಕ್ಫ್‌ ಮಂಡಳಿಯದ್ದು ಸಮಸ್ಯೆಯೇ ಅಲ್ಲವೆಂದರೆ, ರೈತರು ಹಾಗೂ ಮಠಗಳ ಸ್ವಾಮೀಜಿಗಳು ಪ್ರತಿಭಟನೆ ಏಕೆ ಮಾಡುತ್ತಿದ್ದಾರೆ? ಬಿಜೆಪಿ ಸಚಿವರು ಎಂದಿಗೂ ಪ್ರತಿ ಜಿಲ್ಲೆಗೆ ಹೋಗಿ ನೋಟಿಸ್‌ ಕೊಡಲು ಸೂಚನೆ ನೀಡಿರಲಿಲ್ಲ. ಆದರೆ ಈಗಿನ ಸಚಿವ ಜಮೀರ್‌ ಅಹ್ಮದ್‌ ಪ್ರತಿ ಜಿಲ್ಲೆಗೆ ಹೋಗಿ ಅಧಿಕಾರಿಗಳನ್ನು ಬೆದರಿಸಿ ನೋಟಿಸ್‌ ಕೊಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕಾನೂನಿನಲ್ಲಿ ತಿದ್ದುಪಡಿ ತಂದು ಈ ತಪ್ಪು ಕೆಲಸವನ್ನು ಸರಿ ಪಡಿಸಲಿದ್ದಾರೆ ಎಂದರು.

ಪ್ರಧಾನಿ ನೆಹರು ಕಾಲದಲ್ಲೇ ಧರ್ಮಾಧಾರಿತವಾಗಿ ದೇಶವನ್ನು ವಿಭಜಿಸಲಾಯಿತು. ಅದೇ ಮಾದರಿಯಲ್ಲಿ ತುಷ್ಟೀಕರಣವನ್ನು ಮಾಡಿ ವಕ್ಫ್‌ ಮಂಡಳಿಗೆ ಪರಮಾಧಿಕಾರ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಜಮೀರ್‌ ಅಹ್ಮದ್‌ ಭೂಮಿ ಕಬಳಿಕೆಗೆ ಆದೇಶ ನೀಡಿದ್ದಾರೆ. ಇದರಿಂದಾಗಿ ರೈತರು ಆತಂಕಕ್ಕೀಡಾಗಿದ್ದಾರೆ ಎಂದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!