Video| ವಾಷಿಂಗ್ ಮಿಷನ್ ಸರ್ವೀಸ್ ಹೆಸರಲ್ಲಿ ದೋಖಾ..!: ಯುವಕರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಕಂಪನಿ ಎಜೆಂಟ್ಸ್.! Chikkaballapura

ಚಿಕ್ಕಬಳ್ಳಾಪುರ. (Chikkaballapura): ದುಡ್ಡು ದುಡಿಯೋಕೆ ಹಲವರು ನಾನಾ ದಾರಿ ಹುಡುಕ್ಕೊಂಡು ಇರ್ತಾರೆ.. ಅದೇ ರೀತಿ ಇಲ್ಲಿ ಮೂವರು ಯುವಕರು ಸಹ ಐಎಫ್ ಬಿ ವಾಷಿಂಗ್ ಮಿಷನ್ ಸರ್ವೀಸ್ ಮಾಡೋ ನೆಪದಲ್ಲಿ ಗ್ರಾಹಕರಿಗೆ ಉಂಡೆನಾಮ ಹಾಕ್ತಿದ್ದರಂತೆ.

ಅದ್ರಲ್ಲೂ ಕಂಪನಿಗೆ ಅವರಿಗೂ ಸಂಬಂಧ ಇಲ್ಲದಿದ್ರೂ ಕಂಪನಿ ಹೆಸರು ಬಳಸಿಕೊಂಡು ದೋಖಾ ಮಾಡ್ತಿದ್ದ ಯುವಕರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಅರೇ ಅದೇನ್ ಯುವಕರು ಮಾಡ್ತಿದ್ದ ದೋಖಾ ಅಂದ್ರಾ ಈ ಸ್ಟೋರಿ ನೋಡಿ.

ಅರ್ಜುನ್, ದರ್ಶನ್ ಹಾಗೂ ಮಂಜುನಾಥ್ ಅಂತ ಮೂವರು ಮಂಡ್ಯ ಮೂಲದವರನ್ನು ಐಎಫ್ ಬಿ ಕಂಪನಿಯ ಎಜೆಂಟರ್ ಚಿಕ್ಕಬಳ್ಳಾಪುರ ನಗರದಲ್ಲಿ ರೆಡ್ ಹ್ಯಾಂಡಾಗಿ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಅಷ್ಟಕ್ಕೂ ಇವರು ಮಾಡಿರೋ ತಪ್ಪೇನು ಅಂದ್ರೆ ಇವರಿಗೂ ಐಎಫ್ ಬಿ ಕಂಪನಿಗೂ ಯಾವುದೇ ಸಂಬಂಧ ಇಲ್ಲ. ಆದ್ರೂ ಐಎಫ್ ಬಿ ಕಂಪನಿ ಹೆಸರು ಹೇಳಿಕೊಂಡು ಐಎಫ್ ಬಿ ವಾಷಿಂಗ್ ಮಿಷನ್ ಖರೀದಿಸಿರುವ ಗ್ರಾಹಕರಿಗೆ ತಾವು ಐಎಫ್ ಬಿ ಕಂಪನಿ ಅವರು ಅಂತ ಕರೆ ಮಾಡಿ ವಾಷಿಂಗ್ ಮಿಷನ್‌ ಫ್ರೀ ಸರ್ವೀಸ್ ಮಾಡಿಕೊಡುವುದಾಗಿ ಹೇಳಿ ಆಸಲಿ ಬಿಡಿಭಾಗಗಗಳನ್ನ ಕದ್ದು ನಕಲಿ ಬಿಡಿಭಾಗಗಳನ್ನ ಹಾಕಿ ಮೋಸ ಮಾಡಿದ್ರಂತೆ.

ಆಮೇಲೆ ಫ್ರೀ ಸರ್ವೀಸ್ ಅಂತ ಹೇಳಿದವರು ಸರ್ವೀಸ್ ಮಾಡಿದ ಮೇಲೆ ಅದು ಹೋಗಿದೆ ಇದು ಹೋಗಿದೆ ಅಂತ ಗ್ರಾಹಕರ ಬಳಿ ಸಾವಿರಾರು ರೂಪಾಯಿ ಬಿಲ್ ಪಡೀತಿದ್ರಂತೆ.. ಇದ್ರಿಂದ ಗ್ರಾಹಕರೊಬ್ಬರು ಆಸಲಿ ಐಎಫ್ ಬಿ ಚಂದದಾರರನ್ನ ಸಂಪರ್ಕಿಸಿದಾಗ ಇವರು ನಕಲಿ ಅನ್ನೋದು ಗೊತ್ತಾಗಿದೆ.

ಇನ್ನೂ ಚಿಕ್ಕಬಳ್ಳಾಪುರದಲ್ಲಿ ಗ್ರಾಹಕರಿಂದ ಪದೇ ಪದೇ ದೂರು ಗಳು ಕೇಳಿಬರ್ತಿದ್ದ ಕಾರಣ ಐಎಫ್ ಬಿ ಸೇವಾ ಚಂದಾದಾರರಾದ ಚಿಕ್ಕಬಳ್ಳಾಪುರದ ಚರಣ್ ಎಂಬುವವರು ನಕಲಿ ಸೇವಾದಾರರನ್ನ ಖೆಡ್ಡಾಗೆ ತೋಡಲು ಬಲೆ ಬೀಸಿದ್ದಾರೆ.

ವಾಷಿಂಗ್ ಮಿಷನ್ ಸರ್ವೀಸ್ ಇದೆ ಬನ್ನಿ ಅಂತ ಕರೆಸಿಕೊಂಡು ಮೂವರನ್ನ ಹಿಡಿದು ಚಿಕ್ಕಬಳ್ಳಾಪುರ ನಗರ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

ಸದ್ಯ‌ ಮೂವರನ್ನ ವಶಕ್ಕೆ ಪಡೆದಿರೋ ಚಿಕ್ಕಬಳ್ಳಾಪುರ ನಗರ ಪೊಲೀಸರು ಚರಣ್ ಎಂಬುವವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಗಳ ಬಳಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಇನ್ನೂ ಈ ಕೃತ್ಯದಲ್ಲಿ ಹಲವರು ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದ್ದು ಅವರ ಪತ್ತೆಗೂ ಪೊಲೀಸರು ಚಿಂತನೆ ನಡೆಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!