ಹರಿತಲೇಖನಿ ದಿನಕ್ಕೊಂದು ಕಥೆ: ಗೆಲುವಿನ ದಾರಿ| Daily story

Daily story: ರಂಗಪ್ಪ ಎಂಬ ರೈತ ತನ್ನ ಮಗ ಶಂಕರನನ್ನು ಶಾಲೆಗೆ ಕಳುಹಿಸಿ ವಿದ್ಯಾವಂತನನ್ನಾಗಿ ಮಾಡಬೇಕೆಂದು ಕನಸು ಕಂಡಿದ್ದ. ಅದರಂತೆ ಶಾಲೆಗೆ ಬೇಕಾದ ಎಲ್ಲ ಪುಸ್ತಕಗಳನ್ನು ಖರೀದಿಸಿ ಮೊದಲ ದಿನ ತಾನೇ ಶಾಲೆಗೆ ಹೋಗಿ ಮಗನಿಗೆ ಬಿಟ್ಟು ಬಂದ.

ಶಾಲೆಯಲ್ಲಿ ಹೊಸ ಗೆಳೆಯರು. ಅವರ ಕೀಟಲೆ, ಬೈಗುಳ, ಹೊಡೆದಾಟ ಮೇಲಾಗಿ ಶಿಕ್ಷಕರೆಂಬ ಭಯದಿಂದಲೇ ಶಂಕರ ತತ್ತರಿಸಿದ. ಅಂದು ಹೇಗೋ ಶಾಲೆಯಲ್ಲಿದ್ದು ಬಂದು ತನ್ನ ತಂದೆಯ ಹತ್ತಿರ ‘ಅಪ್ಪಯ್ಯಾ ನಾಳೆಯಿಂದ ನಾನು ಶಾಲೆಗೆ ಹೋಗುವುದಿಲ್ಲ. ಅಲ್ಲಿ ಗೆಳೆಯರು, ಹೊಡೆಯುತ್ತಾರೆ. ಬೈಯುತ್ತಾರೆ’ ಎಂದು ಹೇಳಿದ.

ರಂಗಪ್ಪನು ಮಗನಿಗೆ ‘ಹೊಸದಾಗಿ ಶಾಲೆಗೆ ಹೋಗಿದ್ದೀಯಾ, ಸ್ವಲ್ಪ ದಿನ ಮಗಾ, ಏನೂ ಆಗುವುದಿಲ್ಲ, ಮುಂದೆ ಅವರೇ ನಿನಗೆ ಮಿತ್ರರಾಗುತ್ತಾರೆ. ನೀನು ಧೈರ್ಯದಿಂದ ಇರು’ ಎಂದು ಹೇಳಿದ. ಆದರೆ ಶಂಕರನು ಕೇಳಲಿಲ್ಲ.

ಮರುದಿನ ಮಗನಿಗೆ ಊಟದ ಚೀಲ ಮತ್ತು ಪಾಟಿ ಚೀಲವನ್ನು ತೆಗೆದುಕೊಂಡು ಅವನಿಗೆ ಪ್ರಿಯವಾದ ಲಾಡು ಉಂಡಿಯನ್ನು ಕೊಡಿಸಿ ‘ಇವತ್ತು ನಾನು ನಿನಗೆ ಶಾಲೆಗೆ ಬಿಡುತ್ತೇನೆ ನಡಿ’ ಎಂದ. ರಸ್ತೆಯಲ್ಲಿ ಶಂಕರನು ‘ನಾನು ಒಲ್ಲೆ ಶಾಲೆಗೆ…’ ಎಂದು -ಅಳುತ್ತಿದ್ದ..

ಶಾಲೆಯ ಹತ್ತಿರದಲ್ಲಿ ಒಂದು ಸಣ್ಣ ಗುಡ್ಡ ಇತ್ತು ರಂಗಪ್ಪನು ಶಂಕರನಿಗೆ ಅಲ್ಲಿ ಕರೆದುಕೊಂಡು ಹೋಗಿ ಆ ಗುಡ್ಡದ ಮೇಲೆ ಹತ್ತಿದ, ತಂಪಾದ ಗಾಳಿ ಜೋರಾಗಿ ಬೀಸುತ್ತಿತ್ತು. ‘ನೋಡು ಈ ಗಾಳಿಯನ್ನು ಹಿಡಿಯುವುದಕ್ಕೆ ಆಗುವುದಿಲ್ಲ. ಕಣ್ಣಿಗೆ ಕಾಣುವುದಿಲ್ಲ. ಆದರೂ ಈ ದೊಡ್ಡ ದೊಡ್ಡ ಕಲ್ಲುಗಳಿಂದ ಕೂಡಿದ ಗುಡ್ಡವನ್ನು ಎದುರಿಸಿ ಮೈಯೊಡ್ಡಿ ಮುಂದೆ ಹೋಗುತ್ತಿದೆ.

ಅದೇ ರೀತಿ ಮೊದ ಮೊದಲು ನೀನು ಶಾಲೆಗೆ ಹೊರಟಾಗ ಇಂತಹ ಅಡ್ಡಿ ಆತಂಕಗಳು ಸಾಕಷ್ಟು ಬರುತ್ತವೆ. ಅದು ಯಾವುದನ್ನೂ ಲಕ್ಷಿಸದೆ ಧೈರ್ಯದಿಂದ ಮುಂದೆ ಹೋಗು, ಭಯ, ಸಂಕೋಚ, ಅಂಜಿಕೆ ಇಲ್ಲದೆ ಮುಂದೆ ಸಾಗಿದರೆ ಗೆಲವು ನಿನ್ನದೆ…’ ಎಂದು ರಂಗಪ್ಪನು ಹೇಳಿದಾಗ, ಶಂಕರನಿಗೆ ಧೈರ್ಯ ಮೂಡಿಬಂತು.

ಅದೇ ಕ್ಷಣ ನಿರ್ಧಾರ ಮಾಡಿದ ಶಂಕರನು ‘ಅಪ್ಪಯ್ಯ ನೀನು ಮನೆಗೆ ಹೋಗು, ನಾನು ಶಾಲೆಗೆ ಹೋಗುತ್ತೇನೆ’ ಎಂದು ಹೇಳಿ ಶಾಲೆಗೆ ಹೋದನು.

ಕೃಪೆ: ಸಾಮಾಜಿಕ ಜಾಲತಾಣ ( ಲೇಖಕರ ಮಾಹಿತಿ ಲಭ್ಯವಾಗಿಲ್ಲ)

ರಾಜಕೀಯ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ದಿನ ಭವಿಷ್ಯ: ಈ ರಾಶಿಯವರಿಗೆ ಕಾರ್ಯಹಾನಿಯ ಸಂಭವವಿದೆ ಎಚ್ಚರ

ರಾಹುಕಾಲ: 01:30PM ರಿಂದ 3:00PM, ಗುಳಿಕಕಾಲ: 09:00AM ರಿಂದ 10:30AM, ಯಮಗಂಡಕಾಲ: 06:00AM ರಿಂದ 07:30AM, Astrology

[ccc_my_favorite_select_button post_id="115027"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ ಪರಾರಿ!

ದೊಡ್ಡಬಳ್ಳಾಪುರ: ಮನೆಯ ಬಾಗಿಲು ಮೀಟಿ ಕಳ್ಳತನ.. ಲಕ್ಷಾಂತರ ರೂ. ಒಡವೆ, ನಗದು ದೋಚಿ

ಮೊಮ್ಮಗನ ಜನ್ಮದಿನಕ್ಕೆ ತೆರಳಿದ್ದನ್ನೆ ಹೊಂಚು ಹಾಕಿರುವ ದುಷ್ಕರ್ಮಿಗಳು, ಮನೆಯ ಬಾಗಲು ಮೀಟಿ ಲಕ್ಷಾಂತರ ರೂ. ಒಡವೆ, ನಗದು ದೋಚಿ (Theft) ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ

[ccc_my_favorite_select_button post_id="115029"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!