ದೆಹಲಿ: ಹಿರಿಯ ಬಿಜೆಪಿ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ (LK Advani) ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದರಿಂದ ಶನಿವಾರ ಬೆಳಗ್ಗೆ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
96 ವರ್ಷಗಳನ್ನು ಸವೆಸಿರುವ ಮಾಜಿ ಉಪ ಪ್ರಧಾನಿ ಅಡ್ವಾಣಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯದತ್ತ ತಜ್ಞ ವೈದ್ಯರು ನಿಗಾ ಇರಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಡಾ.ವಿನಿತ್ ಸೂರಿ ಅವರು ಅಡ್ವಾಣಿ ಅವರ ಆರೋಗ್ಯ ಸ್ಥಿತಿ ಕುರಿತು ನಿಗಾ ವಹಿಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಈ ವರ್ಷದಲ್ಲಿ ಎರಡನೇ ಭಾರಿಗೆ ಅಡ್ವಾಣಿ ಅವರು ಇದೇ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ.