ಹಾವೇರಿ: ಅಪಘಾತ (Accident) ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ್ದಕ್ಕಾಗಿ ರಾಣೆಬೆನ್ನೂರು ಜೆಎಮ್‌ಎಫ್‌ಸಿ ನ್ಯಾಯಾಲಯ ತಂದೆಗೆ 27 ಸಾವಿರ ರೂ. ದಂಡ ವಿಧಿಸಿದೆ.
ಕಳೆದ ಜುಲೈ 30ರಂದು ರಾಣೆಬೆನ್ನೂರಿನ ಹಲಗೇರಿ ಕ್ರಾಸ್ ಬಳಿ ಬೈಕ್ ಅಪಘಾತ ವಾಗಿತ್ತು. ಜಾಕಿರ್ ಜಮಾಲುದ್ದೀನ್ ಕಮದೋಡ ಎಂಬ ವ್ಯಕ್ತಿ ಗಾಯಗೊ೦ಡಿದ್ದು, ಪ್ರಕರಣ ದಾಖಲಾಗಿತ್ತು.
ರಾಣೆಬೆನ್ನೂರಿನ ಕಾಟೆ ತನ್ನ ದಿಳ್ಳೆಪ್ಪ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ್ದು ಅಪಘಾತಕ್ಕೆ ಕಾರಣವಾಗಿತ್ತು. ಹೀಗಾಗಿ ಬಾಲಕನಿಗೆ ಬೈಕ್ ನೀಡಿದ ತಂದೆಗೆ ರಾಣೆಬೆನ್ನೂರು ಸ್ಥಳೀಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು 27,000 ರೂ. ದಂಡ ವಿಧಿಸಿದ್ದಾರೆ.
ಘಟನೆಯ ಕುರಿತು ರಾಣೆಬೆನ್ನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದಿಳ್ಳೆಪ್ಪ ಕಾಟೆ ವಿರುದ್ಧ ದೂರು ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಬೈಕ್ ಮಾಲೀಕ ತಪ್ಪಿತಸ್ಥ ಎಂದು ತೀರ್ಪು ಪ್ರಕಟಿಸಿದ್ದಾರೆ.