School timings starting tomorrow have changed!

ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ..!; Assembly Sessions

ಬೆಳಗಾವಿ: ತೆರಿಗೆ ಪಾವತಿದಾರರು ಹಾಗೂ ತೆರಿಗೆ ಅಧಿಕಾರಿಗಳ ನಡುವಣ ಗೊಂದಲ ನಿವಾರಿಸಿ, ಒನ್‌ಟೈಮ್ ಸೆಟಲ್‌ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮಗೊಳಿಸುವ ನಿಟ್ಟಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೆ ತಿದ್ದುಪಡಿ ತರುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ (Assembly Sessions) ಅಂಗೀಕಾರ ದೊರೆತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ (ಎರಡನೆ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ವ್ಯಾಪಾರ ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಸೇವೆಗಳ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತಿದೆ ಎಂದರು.

ತೆರಿಗೆ ಪಾವತಿದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕಕ್ಕೆ ಎರಡನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು.

ವಿಧೇಯಕ ಮಂಡಿಸಿ ಮಾತನಾಡಿದ ಕೃಷ್ಣ ಭೈರೇಗೌಡ ಅವರು, ಎಲ್ಲೆಲ್ಲಿ ತೆರಿಗೆದಾರರ ಹಾಗೂ ತೆರಿಗೆ ಅಧಿಕಾರಿಗಳ ನಡುವೆ ಗೊಂದಲ ಇದೆ, ಈ ಗೊಂದಲಗಳಿಗೆ ತೆರೆ ಎಳೆಯುವ ಹಾಗೂ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಈ ತಿದ್ದುಪಡಿಯ ಪ್ರಮುಖ ಉದ್ದೇಶ.

ಕಳೆದ ನಾಲ್ಕೈದು ವರ್ಷಗಳ ಅನುಭವದಲ್ಲಿ ಎಲ್ಲೆಲ್ಲಿ ಕಾನೂನುಗಳ ಅಗತ್ಯ ಇದೆ ಅದನ್ನು ಅನುಭವದ ಆಧಾರದಲ್ಲಿ ಗುರುತಿಸಲಾಗಿದೆ. ಹಾಗೂ ಕೆಲವು ವಿಚಾರಗಳನ್ನು ವ್ಯಾಖ್ಯಾನ ಮಾಡುವಾಗ ಒಂದಕ್ಕೊಂದು ತದ್ವಿರುದ್ಧವಾಗಿದ್ದ ವಿಚಾರಗಳನ್ನು ಸರಳೀಕರಣಗೊಳಿಸುವ ಕೆಲಸ ಈ ತಿದ್ದುಪಡಿಯಲ್ಲಿ ಮಾಡಲಾಗಿದೆ ಎಂದರು.

ತಿದ್ದುಪಡಿಯಿಂದ ಖಜಾನೆಗೆ 15,000 ತೆರಿಗೆ ಸಂಗ್ರಹ

ಸರ್ಕಾರ ಹಾಗೂ ತೆರಿಗೆದಾರರ ನಡುವೆ 80,000 ಸಾವಿರ ವ್ಯಾಜ್ಯ ಪ್ರಕರಣಗಳು ವಿವಿಧ ಕಾರಣಗಳಿಗಾಗಿ ವಿಲೇವಾರಿಗೆ ಬಾಕಿ ಇರುವ ಕಾರಣದಿಂದ ರೂ.15,000 ಕೋಟಿ ತಕರಾರಿನಲ್ಲಿದೆ. ಈಗಿನ ತಿದ್ದುಪಡಿಯಿಂದ ಎಲ್ಲಾ ಪ್ರಕರಣಗಳೂ ಇತ್ಯರ್ಥವಾದರೆ ಖಜಾನೆಗೆ ರೂ.15,000 ಕೋಟಿ ಸಂಗ್ರಹವಾಗುವ ಸಾಧ್ಯತೆ ಇದೆ.

ಅಧಿಕಾರಿಗಳ ಹಾಗೂ ತೆರಿಗೆ ಪಾವತಿದಾರರ ನಡುವೆ ಒಪ್ಪಂದ ಆಗದ ಕಾರಣ ಸುಮಾರು 80,000 ವ್ಯಾಜ್ಯ ಪ್ರಕರಣ ನ್ಯಾಯಾಲಯಗಳಲ್ಲಿವೆ. ಕಾನೂನು ಪ್ರಕ್ರಿಯೆಯಲ್ಲಿರುವ ಕಾರಣ ಬರುತ್ತಿರುವ ತೆರಿಗೆ ಸಹ ನಿಂತುಹೋಗಿದೆ ಎಂದರು.

“ಈ ಹಿಂದೆ ಮೌಲ್ಯ ವರ್ಧಿತ ತೆರಿಗೆ (ವ್ಯಾಟ್ ಪದ್ಧತಿ) ಜಾರಿಯಲ್ಲಿದ್ದ ಸಂದರ್ಭದಲ್ಲಿ ಅಂದಿನ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ವ್ಯಾಟ್ ಬಗೆಗಿನ ವ್ಯಾಜ್ಯಗಳ ಇತ್ಯರ್ಥಕ್ಕೆ ಒನ್ ಟೈಮ್ ಸೆಟಲ್ಮೆಂಟ್‌ಗೆ ಅವಕಾಶ ಕೊಟ್ಟಿದ್ದರು. ಪ್ರಸ್ತುತ ಇದೇ ಮಾದರಿಯನ್ನು ಮುಂದುವರೆಸಲು ನಿರ್ಧರಿಸಿ, 80,000 ಪ್ರಕರಣಗಳಿಗೆ ಒನ್‌ಟೈಮ್ ಸೆಟಲ್‌ಮೆಂಟ್ ಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಈಗಲೇ ವ್ಯಾಜ್ಯವನ್ನು ಇತ್ಯರ್ಥಪಡಿಸಿಕೊಂಡರೆ ಬಡ್ಡಿ ಹಾಗೂ ದಂಡ ಹೊರತುಪಡಿಸಿ ಮೂಲ ಹಣ ಪಾವತಿ ಮಾಡಿದರೆ ಸಾಕು. ಈ ಸೆಟಲ್‌ಮೆಂಟ್‌ಗೆ ಅವಕಾಶ ನೀಡಿದರೆ, ಹಲವರು ಇತ್ಯರ್ಥಕ್ಕೆ ಮುಂದೆ ಬರಬಹುದು. ಇದರಿಂದ ಸರ್ಕಾರದ ಖಜಾನೆಗೆ ಹಣ ಹರಿದುಬರಲಿದೆ ಎಂದರು.

ತೆರಿಗೆದಾರರು ಜಿಎಸ್‌ಟಿ ನ್ಯಾಯಾಧೀಕರಣದಲ್ಲಿ ಪ್ರಕರಣ ದಾಖಲಿಸುವಾಗ ಭದ್ರತಾ ಠೇವಣಿ ರೂಪದಲ್ಲಿ ರೂ.50 ಕೋಟಿ ಹಣ ಠೇವಣಿ ಇಡಬೇಕು. ತೆರಿಗೆದಾರರ ಪಾಲಿಗೆ ಇದು ದೊಡ್ಡ ಹೊರೆ. ಹೀಗಾಗಿ ಈ ಪ್ರಮಾಣವನ್ನು ರೂ.20 ಕೋಟಿಗೆ ಇಳಿಸಬೇಕು ಎಂದು ಹಲವು ವ್ಯವಹಾರಸ್ಥರು ಕೇಳಿಕೊಂಡಿದ್ದರು.

ಅದರಂತೆ ಇದೀಗ ಭದ್ರತಾ ಠೇವಣಿ ಹಣವನ್ನು ರೂ.20 ಕೋಟಿ ರೂಪಾಯಿಗೆ ಉಳಿಸಲಾಗಿದೆ. ಇಲ್ಲದಿದ್ದರೆ, ತೆರಿಗೆದಾರರು ಸುಪ್ರೀಂ ಕೋರ್ಟ್ಗೆ ಹೋಗ್ತಾರೆ. ಇದರಿಂದ ಸರ್ಕಾರಕ್ಕೂ ನಷ್ಟ, ತೆರಿಗೆದಾರರಿಗೂ ಕಷ್ಟ” ಎಂದು ವಿವರಿಸಿದ ಅವರು, ಈ ಕಾನೂನುಗಳನ್ನು ಸರಳೀಕರಿಸುವ ಸಂಬಂಧ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಹುತೇಕ ರಾಜ್ಯಗಳು ಒಪ್ಪಿಗೆ ಸೂಚಿಸಿವೆ. ಅ.01 ರಿಂದಲೇ ಜಾರಿ ಮಾಡಲೂ ಸಹ ರಾಜ್ಯಗಳೂ ಸಮ್ಮತಿಸಿವೆ. ಕರ್ನಾಟಕದಲ್ಲಿ ಅದಕ್ಕೂ ಮೊದಲೇ ಜಾರಿಗೆ ತರಲಾಗಿದೆ.

ಸಚಿವ ಸಂಪುಟದ ಅನುಮತಿ ಪಡೆದು ರಾಜ್ಯಪಾಲರ ಒಪ್ಪಿಗೆಯೊಂದಿಗೆ ಸುಗ್ರೀವಾಜ್ಷೆ ಮೂಲಕ ಈ ವ್ಯವಸ್ಥೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ. ಪ್ರಸ್ತುತ ಸದನದಲ್ಲಿ ಇದಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಅವರು ತಿಳಿಸಿದರು.

ಮದ್ಯ ಮಾಡಲು ಉಪಯೋಗವಾಗುವ ಸ್ಪಿರಿಟ್‌ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ-ಕೇಂದ್ರ ಸರ್ಕಾರಗಳ ನಡುವೆ ತಕರಾರು ಈ ಹಿಂದಿನಿಂದಲೂ ಇತ್ತು. ಆದರೆ, ಇದೀಗ ಸ್ಪಿರಿಟ್ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್‌ಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಸ್ಪಿರಿಟ್ ಅನ್ನು ಜಿಎಸ್‌ಟಿಯಿಂದ ತೆಗೆದು ಹಾಕುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡರು ಸದನಕ್ಕೆ ವಿವರಿಸಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!