ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ; ಸಚಿವ ದಿನೇಶ್ ಗುಂಡೂರಾವ್| Assembly Sessions

ಬೆಳಗಾವಿ Assembly Sessions: ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ ನೇಮಿಸಲಾಗುತ್ತಿದೆ.

ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಒಂದು ವರ್ಷದ ಕಡ್ಡಾಯ ಸೇವೆಗಾಗಿ ಬರುವ ವೈದ್ಯ ಅಭ್ಯರ್ಥಿ/ತಜ್ಞ ವೈದ್ಯ ಅಭ್ಯರ್ಥಿಗಳನ್ನು ವೈದ್ಯರ/ತಜ್ಞರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಇಲಾಖೆಯಲ್ಲಿ ಖಾಲಿಯಿರುವ 120 ತಜ್ಞ ವೈದ್ಯರು ಹಾಗೂ 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ರೋಗಿಗಳಿಗೆ ಅಡಚಣೆಯಾಗದಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಫಾರ್ಮಸಿ ಅಧಿಕಾರಿಯ 400 ಹುದ್ದೆ, ಕಿರಿಯ ವೈದ್ಯಾಧಿಕಾರಿ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಯ 150 ಹುದ್ದೆ, ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿಯ 8 ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲೆ ಪರಿಶೀಲನೆಯಲ್ಲಿದೆ.

ಇಲಾಖೆಯಲ್ಲಿ ಖಾಲಿ ಇರುವ 200 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿ ಅಧಿಕಾರಿಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡುವವರೆಗೆ ಜಿಲ್ಲಾ ಮಟ್ಟದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅನುಮತಿ ನೀಡಲಾಗಿದೆ.

ಕಲ್ಯಾಣ ಕರ್ನಾಟಕ ವೃಂದದಲ್ಲಿನ ಖಾಲಿಯಿರುವ ಒಟ್ಟು 320 ವಿವಿಧ ಅರೆ ವೈದ್ಯಕೀಯ ಹುದ್ದೆಗಳನ್ನು ವಿಶೇಷ ನೇಮಕಾತಿ ಸಮಿತಿ ಮೂಲಕ ಭರ್ತಿ ಮಾಡಲು Online ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ.

ಕಲ್ಯಾಣ ಕರ್ನಾಟಕ ವೃಂದದಲ್ಲಿನ ಸಹಾಯಕ ಕೀಟ ಶಾಸ್ತ್ರಜ್ಞರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಖಾಲಿಯಿರುವ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಮುಂದುವರೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 9871 ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿದ್ದು, ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಿದ ನಂತರ ಈ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!