Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ನೆಲಮಂಗಲ: ಲಾರಿಗಳ ನಡುವಿನ ಅಪಘಾತದ ನಂತರ ಕಂಟೇನರ್​ವೊಂದು ಡಿವೈಡರ್​ ಹಾರಿ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ (Accident) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಇಬ್ಬರು ಮಕ್ಕಳು, ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

ವಿಜಯಪುರದ ಉದ್ಯಮಿ 48 ವರ್ಷದ ಚಂದ್ರ ಯಾವಪ್ಪವೋಳ, 16 ವರ್ಷದ ಧ್ಯಾನ್, 12 ವರ್ಷದ ದೀಕ್ಷಾ, 36 ವರ್ಷದ ವಿಜಯ ಲಕ್ಷ್ಮಿ, 42 ವರ್ಷದ ಗೌರಬಾಯಿ, 6 ವರ್ಷದ ಆರ್ಯ ಮೃತ ದುರ್ದೈವಿಗಳು.

ಟಿ.ಬೇಗೂರು ಬಳಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ.

ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್‌ ಬಿದ್ದಿದ್ದರಿಂದ ಅದರಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಂಟೇನರ್‌ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರಲ್ಲಿದ್ದ ಮೃತದೇಹಗಳು ಕೂಡ ಛಿದ್ರವಾಗಿವೆ. ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ನೆಲಮಂಗಲ ಪೊಲೀಸರ ಭೇಟಿ ನೀಡಿದ್ದು, ಕ್ರೇನ್ ಬಳಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಗಿದೆ.

ಕಂಟೈನರ್ ಲಾರಿ ಮೇಲೆ ಬಿದ್ದ ಪರಿಣಾಮ ಇನ್ನೋವಾ ಕಾರು ನಜ್ಜುಗುಜ್ಜಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]