Cmsiddaramaiah| ಜನವರಿ 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025

ಬೆಂಗಳೂರು: ಕರ್ನಾಟಕ ಕ್ರೀಡಾಕೂಟ-2025  ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಸೂಚಿಸಿದರು.

ಕರ್ನಾಟಕ ಕ್ರೀಡಾಕೂಟ -2025 ವನ್ನು  ಜನವರಿ 17ರಿಂದ  23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದ್ದು ಗೃಹ ಸಚಿವರು ಭಾಗಿಯಾಗಲಿದ್ದಾರೆ.

ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು  ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.
ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4500 ಜನರು ಭಾಗವಹಿಸಲಿದ್ದು ಊಟ -ತಿಂಡಿ,ವಸತಿ , ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

ಕ್ರೀಡಾಕೂಟ ಲಾಂಛನ ಬಿಡುಗಡೆ

ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಿದರು.
ಕ್ರೀಡಾಕೂಟದ ಲೋಗೋದಲ್ಲಿನ  ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು,
ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು ಜತೆಗೆ ಸೋಲು- ಗೆಲುವು ಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವುದಾಗಿ ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಗೃಹಸಚಿವರಾದ ಡಾ ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!