ದೊಡ್ಡಬಳ್ಳಾಪುರ: ಹರಕೆ ಹೊತ್ತು ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ (Ghati Subrahmanya) ದೇವರ ದರ್ಶನಕ್ಕೆ ಬಂದಿದ್ದ ಯುವತಿ ಸಾವನಪ್ಪಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಮೃತ ದುರ್ದೈವಿಯನ್ನು ತುರುವೇಕೆರೆ ನಿವಾಸಿ 24 ವರ್ಷದ ಮೋನಿಷಾ ಎಂದು ಗುರುತಿಸಲಾಗಿದೆ.
ಮೃತ ಮೋನಿಷಾ ಮಧುವೆಯಾಗಲೆಂದು ಹರಕೆ ಹೊತ್ತು ತಾಯಿಯೊಂದಿಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪೂಜೆ ಸಲ್ಲಿಸಲು ಬಂದಿದ್ದ ವೇಳೆ, ಏಕಾಏಕಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಸ್ಥಳೀಯರು ಅಂಬುಲೆನ್ಸ್ ಮೂಲಕ. ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದರೂ ಲೋ ಬಿಪಿ ಉಂಟಾಗಿ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.