Mahatma gandhi: ಡಿ.27 ರಂದು ಬೃಹತ್ ಗಾಂಧೀ‌ ಪ್ರತಿಮೆ ಅನಾವರಣ

ಬೆಳಗಾವಿ: ವಿಧಾನ ಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮಾ ಗಾಂಧೀಜಿಯವರ (Mahatma gandhi) ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಬೆಳಗಾವಿ ಸುವರ್ಣ ಸೌಧ ಆವರಣ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು‌ ಮಾತನಾಡಿದರು.

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ‌ ಸುಧಾರಣೆಯ ಅಸ್ತ್ರವಾಗಿತ್ತು ಎಂದರು.

ಸಮಾಜದಲ್ಲಿನ‌ ಅಸ್ಪ್ರಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆಯನ್ನು ಬೆಸೆಯುವುದರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಲಾಯಿತು.

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೇಸ್ ಅಧಿವೇಶನ ಶತಮಾನೋತ್ಸವನ್ನು ಆಚರಿಸುವ ಮೂಲಕ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪಾಟೀಲ ವಿವರಿಸಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರಕಾರ 41 ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಸುವರ್ಣ ಸೌಧದಲ್ಲಿನ ಮಹಾತ್ಮಾ ಗಾಂಧೀಜಿ ಅವರ ಬೃಹತ ಪ್ರತಿಮೆಯನ್ನು ಡಿ.27 ರಂದು ಮುಂಜಾನೆ 10 ಗಂಟೆಗೆ ಅನಾವರಣಗೊಳಿಸಲಾಗುವದು. ಈ ಬೃಹತ ಕಾರ್ಯಕ್ರಮಕ್ಕೆ ಸರ್ವ ಪಕ್ಷದ ನಾಯಕರು, ಸ್ವಾತಂತ್ರ್ಯ ಹೊರಾಟಗಾರರನ್ನು, ಆಹ್ವನಿಸಲಾಗಿದೆ.

ಡಿ.26 ರಂದು ನಗರದ‌ ವೀರಸೌಧದಲ್ಲಿನ ಗಾಂಧೀಜಿಯವರ ಪ್ರತಿಮೆ ಹಾಗೂ ರಾಮತೀರ್ಥ ನಗರದಲ್ಲಿನ ಗಂಗಾಧರ್ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಉದ್ಘಾಟಿಸಲಾಗುವುದು ಎಂದು ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ‌ ಮುಖ್ಯ ಮುಖ್ಯಮಂತ್ರಿ ವೀರಪ್ಪ‌ ಮೊಯಿಲಿ, ಮಾಜಿ ಸಭಾಪತಿ ಬಿ.ಎಲ್.ಶಂಕರ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ‌ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರು ಹಾಜರಿದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!