ದೊಡ್ಡಬಳ್ಳಾಪುರ: ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (Manmohan Singh) ಅವರು ಅನಾರೋಗ್ಯದ ಕಾರಣ ಗುರುವಾರ ರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್ನಲ್ಲಿ ದಾಖಲಿಸಲಾಗಿತ್ತು.
ಮನಮೋಹನ್ ಸಿಂಗ್ ಅವರು 2004 ರಿಂದ 2014ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.
ಸಿಂಗ್ ಅವರ ಅಗಲಿಕೆ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿ, ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದಾಗಿ ದೇಶ ಮಹಾನ್ ಆರ್ಥಿಕ ತಜ್ಞ, ದೇಶದ ಬಗ್ಗೆ ಕಾಳಜಿ ಹೊಂದಿದ್ದ ನಾಯಕನನ್ನು ಕಳೆದು ಕೊಂಡಿದೆ.
ಖ್ಯಾತ ಆರ್ಥಿಕ ತಜ್ಞರಾಗಿದ್ದ ಸಿಂಗ್ ಅವರ ನೈಪುಣ್ಯತೆ ಕಾರಣ ಆರ್ಥಿಕ ಸಂಕಷ್ಟದಿಂದ ನಮ್ಮ ದೇಶವನ್ನು ಉಳಿಸಿದ ಮಹಾನ್ ವ್ಯಕ್ತಿ ಅವರು. ಅವರು ಕೂಲಿ ಕಾರ್ಮಿಕರು, ಬಡವರು ಹಸಿವಿನಿಂದ ಬಳಲಬಾರದು ಎಂದು ಅವರು ಜಾರಿಗೆ ತಂದ ಆಹಾರ ಭದ್ರತೆ ಕಾಯ್ದೆಯಿಂದಾಗಿ ಇಂದಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಕಾರ್ಡ್ ಮೂಲಕ ಉಚಿತ ಅಕ್ಕಿ, ರಾಗಿ ಮುಂತಾದ ಪಡಿತರ ದೊರಕಲು ಕಾರಣ.
ಪ್ರಧಾನ ಮಂತ್ರಿಗಳಾಗಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಅನೇಕ ಕೊಡುಗೆ ನೀಡಿದ ಮಹಾನ್ ಪುರುಷ. ಅವರ ಆತ್ಮಕ್ಕೆ ಚಿರಶಾಂತಿಯನ್ನು ದೊರಕಲಿ ಎಂದು ಟಿ.ವೆಂಕಟರಮಣಯ್ಯ ಹೇಳಿದ್ದಾರೆ.