ಬೆಂಗಳೂರು: 2024-25ನೇ ಸಾಲಿಗೆ ಯಶಸ್ವಿನಿ (Yashaswini) ಆರೋಗ್ಯ ರಕ್ಷಣಾ ಯೋಜನೆ ಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ.
ಇದರಲ್ಲಿ ಸಹಕಾರ ಸಂಘಗಳ ಸದಸ್ಯರು ಹಾಗೂ ಕುಟುಂಬದವರಿಗೆ 5 ಲಕ್ಷದವರೆಗೆ ವೈದ್ಯಕೀಯ ಚಿಕಿತ್ಸೆಗೆ ಅವಕಾಶವಿದೆ.