ಮಣಿಪುರ, (ಏ.27); ಶಂಕಿತ ಉಗ್ರರು ನಡೆಸಿರುವ ಬಾಂಬ್ ದಾಳಿಗೆ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬಿಷ್ಣುಪುರ್ ಜಿಲ್ಲೆಯಲ್ಲಿ ನಡೆದಿದೆ.
ಉಗ್ರರ ದಾಳಿಯಲ್ಲಿ ಹುತಾತ್ಮರಾದವರನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಬ್ ಇನ್ಸ್ಪೆಕ್ಟರ್ ಎನ್.ಸರ್ಕಾರ್ ಮತ್ತು ಹೆಡ್ ಕಾನ್ಸ್ಟೇಬಲ್ ಅರುಪ್ ಸೈನಿ ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಇನ್ಸ್ಪೆಕ್ಟರ್ ಜಾದವ್ ದಾಸ್ ಮತ್ತು ಕಾನ್ಸ್ಟೇಬಲ್ ಅಫ್ತಾಬ್ ದಾಸ್ ಎಂದು ಗುರುತಿಸಲಾಗಿದೆ.
ಉಗ್ರರ ಗುಂಪು ನರನ್ಸೇನಾ ಗ್ರಾಮದ ಬೆಟ್ಟದಿಂದ ಕಣಿವೆ ಪ್ರದೇಶದ ಕಡೆಗೆ ಕೇಂದ್ರ ಭದ್ರತಾ ಪಡೆಯ ಔಟ್ಪೋಸ್ಟ್ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಈ ವೇಳೆ ಉಗ್ರರು ಔಟ್ಪೋಸ್ಟ್ ಮೇಲೆ ಬಾಂಬ್ ಎಸೆದಿದ್ದಾರೆ.
ಬಾಂಬ್ ಸ್ಪೋಟಗೊಂಡ ಬಳಿಕ ಗುಂಡಿನ ಚಕಮಕಿ ತೀವ್ರಗೊಂಡಿತ್ತು. ದಾಳಿಕೋರರನ್ನು ಪತ್ತೆಹಚ್ಚಲು ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
education
crime
literature
crime
crime
literature
literature
crime
politics
literature
crime
crime
literature
politics
politics
education
economy
politics
literature
crime
politics
politics
politics
literature
politics
literature
crime
politics
crime
politics