ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಘೋಷಣೆ: ಕೇಂದ್ರಕ್ಕೆ ವಾರ್ನಿಂಗ್ ಕೊಟ್ಟು ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್‌ಗೆ ಧನ್ಯವಾದವೆಂದ ಸಿಎಂ
ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಘೋಷಣೆ: ಕೇಂದ್ರಕ್ಕೆ ವಾರ್ನಿಂಗ್ ಕೊಟ್ಟು ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್‌ಗೆ ಧನ್ಯವಾದವೆಂದ ಸಿಎಂ

ನವದೆಹಲಿ, (ಏ.27); ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.

ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿತ್ತು.

ಕೋರ್ಟ್‌ನಲ್ಲಿ ವಿಚಾರಣೆ ಕಾಲಕ್ಕೆ, 'ಕರ್ನಾಟಕದಲ್ಲಿ ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ' ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿತ್ತು.

'ಇದು ರಾಜ್ಯಕ್ಕೆ ಸಿಕ್ಕಿರುವ ಜಯ' ಎಂದು ಪ್ರತಿಪಾದಿಸಿದ್ದ ರಾಜ್ಯ ಸರ್ಕಾರ, 'ವಾರದೊಳಗೆ ಬರ ಪರಿಹಾರ ಬಿಡುಗಡೆಯಾಗಲಿದ್ದು, ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶದಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ' ಎಂದು ಅಭಿಪ್ರಾಯಪಟ್ಟಿತ್ತು.

ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಅದಕ್ಕೆ ಸ್ಪಂದನ ಸಿಗದೇ ಇದ್ದುದರಿಂದ, 'ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದ್ದು, ರಾಜ್ಯಕ್ಕೆ ದ್ರೋಹ ಎಸಗಿದೆ' ಎಂದು ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು.

ಬರಪರಿಹಾರ, ತೆರಿಗೆ ನ್ಯಾಯಕ್ಕಾಗಿ ದೆಹಲಿಯಲ್ಲಿ ಪ್ರತಿಭಟನೆಯನ್ನೂ ಸರ್ಕಾರ ನಡೆಸಿತ್ತು. ವಿಳಂಬವಾಗಿ ಮನವಿ ಸಲ್ಲಿಸಿದ್ದಕ್ಕೆ ಪರಿಹಾರ ನೀಡಲು ಸಾಧ್ಯವಾಗಿಲ್ಲ, ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಹಲವು ಬಾರಿ ಹೇಳಿತ್ತು. ಬಳಿಕವೂ 'ಸಂಘರ್ಷ' ಮುಂದುವರಿದಿತ್ತು.

ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಸಿಎಂ, ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3,498 ಕೋಟಿಗೆ ಅನುಮೋದನೆ ನೀಡಿ, ರೂ. 3,454 ಕೋಟಿ ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ.

ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. 

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ  ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ. 

ಇದರಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. 

ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ  ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. 

ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ. 

ಈ ಬರ ಪರಿಹಾರದ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತಿದ್ದೇನೆ.

ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. 

ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ. 3,454 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೇಂದ್ರದ ಎನ್‌ಡಿಆರ್‌ಆಫ್ ನಿಯಮಗಳ ಪ್ರಕಾರ ರಾಜ್ಯಕ್ಕೆ ರೂ.18171.44 ಕೋಟಿ ಬರ ಪರಿಹಾರ ಹಣ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಕೇವಲ ರೂ. 3498 ಕೋಟಿ ಮಾತ್ರ ಮಂಜೂರು ಮಾಡಿದೆ. 

ಈ ಪ್ರಮಾಣ ನಾವು ಕೇಳಿದ್ದ ಪರಿಹಾರದ ಹಣಕ್ಕಿಂತ ಶೇ.20ಕ್ಕಿಂತ ಕಡಿಮೆ. ಕರ್ನಾಟಕ ಪ್ರಸ್ತುತ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ. 240 ತಾಲೂಕುಗಳಲ್ಲಿ 223 ತಾಲೂಕುಗಳು ಭೀಕರ ಬರಗಾಲದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಬೆನ್ನಿಗೆ ನಿಲ್ಲಬೇಕಿದ್ದ ಕೇಂದ್ರ ಸರ್ಕಾರದಿಂದ ಕೇವಲ ಶೇ.20 ರಷ್ಟು ಹಣವನ್ನು ಮಾತ್ರ ಕರ್ನಾಟಕ ಪಡೆಯುತ್ತಿದೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

crime

HL

literature

HL

literature

HL

crime

HL

crime

HL

politics

HL

health

HL

crime

HL

crime

HL

politics

HL

politics

HL

politics

HL

literature

HL

politics

HL

politics

HL

education

HL

crime

HL

literature

HL

crime

HL

crime

HL

literature

HL

literature

HL

crime

HL

politics

HL

literature

HL

crime

HL

crime

HL

literature

HL

politics