ಮತದಾನದ ವೇಳೆ ಎರಡು ಗುಂಪುಗಳ ನಡುವೆ‌ ಮಾರಾಮಾರಿ.. ಮತಗಟ್ಟೆ ದ್ವಂಸ| ವೈರಲ್ ವಿಡಿಯೋ ನೋಡಿ
ಮತದಾನದ ವೇಳೆ ಎರಡು ಗುಂಪುಗಳ ನಡುವೆ‌ ಮಾರಾಮಾರಿ.. ಮತಗಟ್ಟೆ ದ್ವಂಸ| ವೈರಲ್ ವಿಡಿಯೋ ನೋಡಿ

ಚಾಮರಾಜನಗರ, (ಏ.26); ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮತದಾನ ಬಹಿಷ್ಕಾರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಕಲ್ಲು ತೂರಾಟ ನಡೆಸಿ, ಪ್ರತಿಭಟನೆ  ನಡೆಸಿದ ಘಟನೆ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.

ಇಂಡಿಗನತ್ತ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. ಈ ವೇಳೆ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದಾರೆ. 

ಈ ಸಂಧರ್ಭದಲ್ಲಿ ಇಡೀ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದೇವೆ ಎಂದು ಗ್ರಾಮದ ಒಂದು ಗುಂಪು ಗಲಾಟೆ ಆರಂಭಿಸಿದೆ.

ಇದು ಎರಡು ಗುಂಪುಗಳ ನಡುವೆ ಜಗಳಕ್ಕೆ ಕಾರಣವಾಗಿದ್ದು, ಕೊನೆಗೆ ವಿಕೋಪಕ್ಕೆ ತಿರುಗಿ ಇವಿಎಂ ಹಾಗೂ ಮತಗಟ್ಟೆಯ ಪೀಠೋಪಕರಣಗಳನ್ನು ದ್ವಂಸ ಮಾಡಿದ್ದಾರೆ ಎನ್ನಲಾಗಿದೆ. ಗಲಾಟೆಯಲ್ಲಿ ಕೆಲವು ಅಧಿಕಾರಿಗಳಿಗೆ, ಗ್ರಾಮಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. 

ಇಂಡಿಗನತ್ತ ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆಂದು ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

crime

HL

crime

HL

politics

HL

politics

HL

politics

HL

literature

HL

politics

HL

politics

HL

education

HL

crime

HL

literature

HL

crime

HL

crime

HL

literature

HL

literature

HL

crime

HL

politics

HL

literature

HL

crime

HL

crime

HL

literature

HL

politics

HL

politics

HL

education

HL

economy

HL

politics

HL

literature

HL

crime

HL

politics

HL

politics